ಬೊಗೋಟಾ: ದಕ್ಷಿಣ ಕೊಲಂಬಿಯಾದ (South Colombia) ಅಮೆಜಾನ್ ಕಾಡು (Amazon Forest) ಪ್ರದೇಶದಲ್ಲಿ ನಡೆದ ವಿಮಾನ ಅಪಘಾತದಲ್ಲಿ (Plane Crash) ಬದುಕುಳಿದ ನಾಲ್ವರು ಕೊಲಂಬಿಯಾ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಶುಕ್ರವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಅಮೆಜಾನ್ ಕಾಡು ಪ್ರದೇಶದಲ್ಲಿ ನಡೆದ ವಿಮಾನ ದುರಂತದಲ್ಲಿ ಲೆಸ್ಲಿ (13), ಸೋಲಿನಿ (9), ಟಿಯೆನ್ ನೊರಿಯಲ್ (5) ಮತ್ತು ಬೇಬಿ ಕ್ರಿಸ್ಟಿನ್ (1) ಎಂಬ ಮಕ್ಕಳು ಬದುಕುಳಿದಿದ್ದು, ಅವರ ತಾಯಿ ಮತ್ತು ಇನ್ನಿಬ್ಬರು ಮೃತಪಟ್ಟಿದ್ದರು. ಕಾಡಿನಲ್ಲಿ ಸತತ 40 ದಿನಗಳು ಕಳೆದ ಈ ಮಕ್ಕಳನ್ನು ಪತ್ತೆಹಚ್ಚಿ ಬೊಗೊಟಾ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಇದೀಗ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಶುಕ್ರವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: Twitter Monetisation: ಕಂಟೆಂಟ್ ಕ್ರಿಯೇಟರ್ಸ್‌ಗಳಿಗೆ ಟ್ವಿಟ್ಟರ್‌ನಿಂದ ಸಿಗುತ್ತೆ ಹಣ – ಹೇಗೆ ಅಂತೀರಾ..?
Advertisement
Advertisement
ನೊರಿಯಲ್ ಮತ್ತು ಬೇಬಿ ಕ್ರಿಸ್ಟಿನ್ ತಂದೆಯಾದ ಮ್ಯಾನುಯೆಲ್ ರಾನೋಕ್ ಮಕ್ಕಳ ಚೇತರಿಕೆ ಕಂಡು ಸಂತಸ ವ್ಯಕ್ತಪಡಿಸಿದ್ದು, ಕೃತಜ್ಞತೆಯನ್ನು ಸಲ್ಲಿಸಿದರು. ನನ್ನ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದು, ಅವರು ನನ್ನೊಂದಿಗೆ ಇರುವುದಿಲ್ಲ. ಬದಲಾಗಿ ಕುಟುಂಬ ಕಲ್ಯಾಣ ಸಂಸ್ಥೆಯು ಅವರನ್ನು ನೋಡಿಕೊಳ್ಳುತ್ತದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಆರೋಗ್ಯವಾಗಿರುವುದು ನನಗೆ ತುಂಬಾ ಸಂತಸವನ್ನು ಉಂಟುಮಾಡಿದೆ ಎಂದು ಮ್ಯಾನುಯೆಲ್ ರಾನೋಕ್ ತಿಳಿಸಿದ್ದಾರೆ. ಇದನ್ನೂ ಓದಿ: Miracle: ಅಪಘಾತಕ್ಕೀಡಾಗಿ ಬೇರ್ಪಟ್ಟ ತಲೆಯನ್ನು ಜೋಡಿಸಿ ಯಶಸ್ವಿಯಾದ ವೈದ್ಯರು!
Advertisement
ಮಕ್ಕಳನ್ನು 6 ತಿಂಗಳ ಕಾಲ ತಾತ್ಕಾಲಿಕವಾಗಿ ನೋಡಿಕೊಳ್ಳುವ ಕೊಲಂಬಿಯಾದ ಕುಟುಂಬ ಕಲ್ಯಾಣ ಸಂಸ್ಥೆಯು ನಾಲ್ವರು ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂಬುದನ್ನು ಖಚಿತಪಡಿಸಿದೆ. ಇನ್ಸ್ಟಿಟ್ಯೂಟ್ ನಿರ್ದೇಶಕರಾಗಿರುವ ಆಸ್ಟ್ರಿಡ್ ಈ ಕುರಿತು ಮಾಹಿತಿ ನೀಡಿದ್ದು, ಮಕ್ಕಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಅಲ್ಲದೇ ಅಮೆಜಾನ್‌ನಲ್ಲಿ 40 ದಿನ ಅಲೆದಾಡಿದ್ದ ಇವರಲ್ಲಿ ತೀವ್ರತರ ದೈಹಿಕ ಸಮಸ್ಯೆ ಈಗ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟೆಸ್ಟಿಂಗ್ ವೇಳೆ ರಾಕೆಟ್ ಎಂಜಿನ್ ಸ್ಫೋಟ – ಜಪಾನ್ ಬಾಹ್ಯಾಕಾಶ ಸಂಸ್ಥೆಗೆ ಮತ್ತೆ ನಿರಾಸೆ
Advertisement
ವಿಮಾನ ಪತನದ ಬಳಿಕ ಈ ಮಕ್ಕಳು ಅಮೆಜಾನ್ ಕಾಡಿನಲ್ಲಿ ನಾಪತ್ತೆಯಾಗಿದ್ದರು. ಇವರನ್ನು ಹುಡುಕುವ ಸಲುವಾಗಿ ಸುಮಾರು 200 ಮಿಲಿಟರಿ ಮತ್ತು ಸ್ಥಳೀಯ ರಕ್ಷಕರನ್ನು ಒಳಗೊಂಡಿದ್ದ ರಕ್ಷಣಾ ಕಾರ್ಯಾಚರಣಾ ತಂಡವು ಅಮೆಜಾನ್ ಕಾಡಿನಲ್ಲಿ ಶೋಧಕಾರ್ಯವನ್ನು ನಡೆಸಿತ್ತು. ಇದನ್ನೂ ಓದಿ: ಇನ್ನು ಮುಂದೆ ಫ್ರಾನ್ಸ್‌ನಲ್ಲೂ ರೂಪಾಯಿಯಲ್ಲೇ ವ್ಯವಹಾರ ಮಾಡಬಹುದು
Web Stories