CrimeDistrictsKarnatakaLatestMain PostShivamogga

ಭದ್ರಾ ನಾಲೆಯಲ್ಲಿ ಈಜಲು ಹೋದ ಮಕ್ಕಳು ನಾಪತ್ತೆ

ಶಿವಮೊಗ್ಗ: ಭದ್ರಾ ನಾಲೆಯಲ್ಲಿ ಈಜಲು ತೆರಳಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ನಡೆದಿದೆ.

ನಾಪತ್ತೆಯಾದ ಮಕ್ಕಳನ್ನು ಚಂದನಾ(14), ಹರ್ಷ(10) ಎಂದು ಗುರುತಿಸಲಾಗಿದೆ. ಹೊಳೆಹೊನ್ನೂರು ಸಮೀಪದ ಹಂಚಿನ ಸಿದ್ದಾಪುರ ಬಳಿ ಭದ್ರಾ ಬಲದಂಡೆ ನಾಲೆಯಲ್ಲಿ ನಾಲ್ವರು ಮಕ್ಕಳು ಈಜಲು ತೆರಳಿದ್ದರು. ಈ ಸಂದರ್ಭ ಮಕ್ಕಳು ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನಲೆಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ ಟ್ವೀಟ್ 

POLICE JEEP

ಶಿವಮೊಗ್ಗ ತಾಲೂಕಿನ ಮುದುವಾಲ ಗ್ರಾಮದ ಮಕ್ಕಳು ಶಾಲೆಗೆ ರಜೆ ಇದ್ದ ಹಿನ್ನೆಲೆ ಅಗರದಹಳ್ಳಿಯ ತಮ್ಮ ದೊಡ್ಡಪ್ಪನ ಮನೆಗೆ ಬಂದಿದ್ದರು. ಬುಧವಾರ ದೊಡ್ಡಪ್ಪನ ಜೊತೆಗೆ ಭದ್ರಾನಾಲೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನಾಲೆಯಲ್ಲಿ ನಾಪತ್ತೆಯಾಗಿದ್ದಾರೆ.

ವಿಷಯ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೋಟ್ ಬಳಸಿ ನಾಪತ್ತೆಯಾಗಿರುವ ಮಕ್ಕಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಬುಧವಾರ ಮಕ್ಕಳು ಪತ್ತೆಯಾಗಿಲ್ಲ. ಇಂದು ಸಹ ಶೋಧ ಕಾರ್ಯ ಮುಂದುವರಿಸಲಾಗಿದೆ. ಇದನ್ನೂ ಓದಿ:  ಯಾವಾಗ ಸಿಎಂ ಸ್ಥಾನಕ್ಕೆ ಕೂರ್ತೀವಿ ಎಂದು ಕನಸು ಕಾಣ್ತಿದ್ದಾರೆ: ಡಿಕೆಶಿಗೆ ಟಾಂಗ್ ಕೊಟ್ಟ ಬಿ.ವೈ.ವಿಜಯೇಂದ್ರ 

ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Back to top button