ಬೆಂಗಳೂರು: ರಾಜ್ಯ ಬಿಜೆಪಿ ಸಚಿವರ ಮಾತು ಹೈಕಮಾಂಡ್ ಅಂಗಳ ತಲುಪಿದೆ. ಇದರಿಂದ ಸರ್ಕಾರಕ್ಕೆ ತೀವ್ರ ಮುಜುಗರ ಆಗಿದೆ.
ಸರ್ಕಾರ ನಡೀತಿಲ್ಲ, ಮ್ಯಾನೇಜ್ ಮಾಡ್ತಿದ್ದೀವಿ ಎಂಬ ಸಚಿವ ಮಾಧುಸ್ವಾಮಿ ಹೇಳಿಕೆ ಹಾಗೂ ಸಿದ್ದರಾಮಯ್ಯ ಸಿಎಂ ಆಗಬೇಕೆಂಬ ಸಚಿವ ಶ್ರೀರಾಮುಲು ಹೇಳಿಕೆಗಳಿಂದ ಡ್ಯಾಮೇಜ್ ಆಗಿದೆ. ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಪದಾಧಿಕಾರಿಗಳ ಸಭೆಯಲ್ಲೂ ಸಚಿವರ ಹೇಳಿಕೆಗಳ ಬಗ್ಗೆ ಪ್ರಸ್ತಾಪ ಆಗಿದ್ದು, ಪದಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಹ ಯಾರೂ ಬಹಿರಂಗವಾಗಿ ನಕಾರಾತ್ಮಕ ಹೇಳಿಕೆ ಕೊಡದಂತೆ ತಾಕೀತು ಮಾಡಿದ್ದಾರೆ. ಈ ಸಂಬಂಧ ಹೈಕಮಾಂಡ್‍ಗೆ ವರದಿ ಕೊಡಲಿದ್ದಾರೆ. ಸಿಎಂ ಬದಲಾವಣೆ ಕುರಿತ ಮಾಜಿ ಶಾಸಕ ಸುರೇಶ್ ಗೌಡರ ಹೇಳಿಕೆಯ ಪರಿಣಾಮದ ಜತೆಗೆ ಸಚಿವರಾದ ಮಾಧುಸ್ವಾಮಿ, ಶ್ರೀರಾಮುಲು ಹೇಳಿಕೆಗಳಿಂದಾದ ಮುಜುಗರ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗುತ್ತದೆ ಎನ್ನಲಾಗಿದೆ.
ಬಿಎಸ್‍ವೈಗೆ ಸ್ಥಾನಮಾನ ಕೊಟ್ಟ ಬಳಿಕ ಪಕ್ಷದ ಒಳಗಿನ & ಹೊರಗಿನ ಚಿತ್ರಣದ ಬಗ್ಗೆಯೂ ವರದಿಯಲ್ಲಿ ಪ್ರಸ್ತಾಪ ಮಾಡಲಾಗುತ್ತದೆ ಎನ್ನಲಾಗ್ತಿದೆ.