Bengaluru Rural
ಬಸ್-ಲಾರಿ ನಡುವೆ ಡಿಕ್ಕಿ-ಇಬ್ಬರ ದುರ್ಮರಣ

ಬೆಂಗಳೂರು: ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ನೈಸ್ ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದೆ.
ಹೈದರಾಬಾದ್ ಮೂಲದ ಶೇಖರ್ (24), ಅನಿತಾ (26) ಮೃತ ದುರ್ದೈವಿಗಳು. ಬಸ್ ತಮಿಳುನಾಡಿನಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿತ್ತು. ಈ ವೇಳೆ ಲಾರಿ ನೇರವಾಗಿ ಬಂದು ಬಸ್ ಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
