ರಾಮನಗರ: ಕಾಂಗ್ರೆಸ್ (Congress) ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್ (Ballot Paper) ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ ಪೇಪರ್ನಲ್ಲೇ ಕಾಂಗ್ರೆಸ್ ಸೋತಿದೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ಪರಿಷತ್ ಚುನಾವಣೆ (MLC Election) ಫಲಿತಾಂಶ ವಿಚಾರವಾಗಿ ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕು ರಾಜ್ಯಗಳಲ್ಲಿ ನಡೆದ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆದ್ದಿದ್ದಾರೆ. ನಮ್ಮ ರಾಜ್ಯದ ನಾಲ್ಕು ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಗೆದ್ದಿದ್ದಾರೆ. ಇದು ಎರಡೂ ಪಕ್ಷಗಳ ಕಾರ್ಯಕರ್ತರ ಶ್ರಮ. ಎ.ಪಿ.ರಂಗನಾಥ್ರವರಿಗೆ ಶಿಕ್ಷಕರು ಒಂದು ಅವಕಾಶ ಕೊಟ್ಟಿದ್ದಾರೆ. ಬ್ಯಾಲೆಟ್ ಪೇಪರ್ನಲ್ಲೇ ಕಾಂಗ್ರೆಸ್ ಸೋತಿದೆ. ಇದು ಮುಂಬರುವ ಚುನಾವಣೆಗಳ ದಿಕ್ಸೂಚಿ ಅಂತ ಕಾಂಗ್ರೆಸ್ ಅರ್ಥ ಮಾಡಿಕೊಳ್ಳಬೇಕು ಎಂದು ಟೀಕಿಸಿದರು. ಇದನ್ನೂ ಓದಿ: ಅಪ್ಪು ಸ್ಮಾರಕಕ್ಕಾಗಿ ಸಿಎಂಗೆ ಮನವಿ ಮಾಡಿದ್ದೇವೆ: ರಾಘವೇಂದ್ರ ರಾಜಕುಮಾರ್
ಮುಂದೆ ಕರ್ನಾಟಕ ಸೇರಿ ಮೂರು ರಾಜ್ಯಗಳ ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ಗೆ ಪತನದ ದಿನಗಳು ಹತ್ತಿರ ಬರುತ್ತಿದೆ. ಕಾಂಗ್ರೆಸ್ 136 ಸ್ಥಾನ ಪಡೆದಿದೆ, ಆದ್ರೆ ಅಭಿವೃದ್ಧಿ ಕಡೆ ಗಮನ ಕೊಡುತ್ತಿಲ್ಲ. ಅಭಿವೃದ್ಧಿ ಕಡೆ ಫೋಕಸ್ ಮಾಡಿದ್ರೆ ಕಾಂಗ್ರೆಸ್ಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ. ಬದಲಾವಣೆ ಜಗದ ನಿಯಮ, ಜನ ಬದಲಾವಣೆ ಬಯಸಿದ್ದಾರೆ ಎಂದರು. ಇದನ್ನೂ ಓದಿ: ನಾನು ‘ಬಾಂಬೆ ಡೇಸ್’ ಪುಸ್ತಕ ಬಿಡುಗಡೆ ಮಾಡಲ್ಲ: ಹೆಚ್.ವಿಶ್ವನಾಥ್
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ನಮ್ಮ ಹೈಕಮಾಂಡ್ ನಾಯಕರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇದು ನಾಲ್ಕು ಗೋಡೆ ಮಧ್ಯೆ ಚರ್ಚೆ ನಡೆಸಿ ನಿರ್ಧಾರ ಮಾಡಬೇಕು. ಸ್ಥಳೀಯ ಸಂಸ್ಥೆಗೆ ಎರಡೂ ಪಕ್ಷದಲ್ಲೂ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಇದರಲ್ಲಿ ಕಾರ್ಯಕರ್ತರ ಅಭಿಪ್ರಾಯವೂ ಮುಖ್ಯ. ಹಾಗಾಗಿ ಈ ಬಗ್ಗೆ ಹಿರಿಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. ಇನ್ನು ರಾಜ್ಯದಲ್ಲಿ ಸ್ಟಿಂಗ್ ಬಗ್ಗೆ ಚರ್ಚೆ ವಿಚಾರವಾಗಿ ಮಾತನಾಡಿ, ಈ ವಿಚಾರವನ್ನ ಕುಮಾರಸ್ವಾಮಿ ಅವರಿಗೆ ಬಿಟ್ಟಿದ್ದೇವೆ, ನಾನು ಚರ್ಚೆ ಮಾಡಲ್ಲ ಎಂದರು. ಇದನ್ನೂ ಓದಿ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಶಾಕ್ – 362 ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ರಕ್ಷಿಸಿದ್ದ ಕಾಯ್ದೆಯೇ ರದ್ದು
