ಕಾಂಗ್ರೆಸ್ ಅವಧಿಯಲ್ಲಿ ದೇಶದ ರಕ್ಷಣಾ ಕ್ಷೇತ್ರ ಬಲಪಡಿಸಿಲ್ಲ: ಶೋಭಾ ಕರಂದ್ಲಾಜೆ

Public TV
1 Min Read
Shobha Karandlaje

ಹುಬ್ಬಳ್ಳಿ: ಕಾಂಗ್ರೆಸ್ (Congress) ಅಧಿಕಾರದಲ್ಲಿದ್ದಾಗ ದೇಶದ ರಕ್ಷಣಾ ಕ್ಷೇತ್ರವನ್ನು ಬಲಪಡಿಸಿಲ್ಲ. ರಕ್ಷಣಾ ಸಾಮಾಗ್ರಿಗಳನ್ನು ತಯಾರು ಮಾಡುವ ಸಂಸ್ಥೆಗಳಿಗೂ ಸಹ ಹಣಕಾಸಿನ ನೆರವು ನೀಡಿರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ದೇಶ ಸಂಕಷ್ಟ ಮತ್ತು ಸಾಧನೆ ಮಾಡಿದ ಎರಡೂ ಸಮಯದಲ್ಲಿ ಕಾಂಗ್ರೆಸ್ ದೇಶದ ವಿರುದ್ಧ ಮಾತನಾಡುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪಾಕ್‌ ವಿರುದ್ಧ ಅಗತ್ಯ ಇದ್ರೆ ಯುದ್ಧ ಮಾಡಿ ಅಂದಿದ್ದೆ, ಕಟ್ ಮಾಡಿ ತೋರಿಸಿ ಬಿಟ್ಟಿದ್ದಾರೆ: ಸಿದ್ದರಾಮಯ್ಯ

ಇಂದು ಭಾರತೀಯ ಸೇನೆ ಸ್ವಾವಲಂಬಿಯಾಗಿ, ಆತ್ಮನಿರ್ಭರವಾಗಿದೆ. ಇದನ್ನು ಕಾಂಗ್ರೆಸ್‍ಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಅನಾವಶ್ಯಕ ಆರೋಪಗಳನ್ನು ಮಾಡುತ್ತಿದೆ. ಈ ಹಿಂದೆ ಸಿಎಂ ಯುದ್ಧ ಯಾಕೆ ಬೇಕು ಎಂದಿದ್ರು. ಜಮೀರ್ ನಾನೇ ಬಾಂಬ್ ಕಟ್ಟಿಕೊಂಡು ಹೋಗ್ತೇನೆ ಎಂದಿದ್ರು. ಒಬ್ಬೊಬ್ಬ ಸಚಿವ, ಶಾಸಕ ಒಂದು ಮಾತನಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಯಾಕೆ ಹೀಗೆ ಹೇಳಿಕೆ ನೀಡುತ್ತಿದೆ. ಹೀಗೆ ಮಾತನಾಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಏನಾದರೂ ಹೇಳಿಕೊಟ್ಟಿದೆಯೇ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಯಾವತ್ತೂ ದೇಶದ ಪರವಾಗಿಲ್ಲ. ಜನ ಎಲ್ಲವನ್ನೂ ನೋಡುತ್ತಿದ್ದಾರೆ. ನಮಗೆ ನಮ್ಮ ಸೈನಿಕರ ಬಗ್ಗೆ ಹೆಮ್ಮೆಯಿದೆ, ತಂತ್ರಜ್ಞಾನದ ಬಗ್ಗೆ ಹೆಮ್ಮೆಯಿದೆ. ಭಾರತ ಇಂದು ಯುದ್ಧ ಸಾಮಾಗ್ರಿಗಳನ್ನು ಬೇರೆ ದೇಶಕ್ಕೆ ರಫ್ತು ಮಾಡುತ್ತಿದೆ ಎಂದಿದ್ದಾರೆ.

ಚೀನಾ ವಸ್ತುಗಳ ನಿಷೇಧ ವಿಚಾರವಾಗಿ, ಚೀನಾದಿಂದ ಹೆಚ್ಚಾಗಿ ಫೋನ್, ಗೊಂಬೆಗಳು ಬರುತ್ತಿವೆ. ಹಂತ ಹಂತವಾಗಿ ಕಡಿವಾಣ ಹಾಕಲಾಗುತ್ತಿದೆ. ಎಲ್ಲವನ್ನೂ ಒಂದೇ ಸಲ ನಿಲ್ಲಿಸಲು ಆಗಿಲ್ಲ. ಈ ಹಿಂದೆ ಸಾಕಷ್ಟು ಒಪ್ಪಂದಗಳು ಆಗಿದೆ. ಸ್ನೇಹಯುತವಾಗಿ ನಾವು ಹೋಗಬೇಕಿದೆ. ವಿಶ್ವಸಂಸ್ಥೆ ನಿಯಮಗಳನ್ನು ಪಾಲನೆ ಮಾಡಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಸಮಾಧಾನ ತಂದಿಲ್ಲ ಅಂದಿದ್ದು, ಸೇನೆ ಬಗ್ಗೆ ಹಗುರವಾಗಿ ಮಾತಾಡಿಲ್ಲ: ಮಂಜುನಾಥ್ ಸ್ಪಷ್ಟನೆ

Share This Article