DistrictsKalaburagiKarnatakaLatestLeading NewsMain Post

ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ – PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ

ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ.

ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಸಿಐಡಿ ಅಧಿಕಾರಿಗಳು ಶುಕ್ರವಾರ ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ದಿವ್ಯಾ ಹಾಗರಗಿ ಕಳೆದ ರಾತ್ರಿ ಮಹಿಳಾ ನಿಲಯದಲ್ಲಿಯೇ ಕಾಲ ಕಳೆದಿದ್ದಾರೆ. ಇದನ್ನೂ ಓದಿ: ಪರೀಕ್ಷೆಗೆ ಹಿಜಬ್ ಧರಿಸಿ ಬಂದ ಡಿಗ್ರಿ ವಿದ್ಯಾರ್ಥಿನಿಗೆ ಅನುಮತಿ ನಿರಾಕರಣೆ

ಸದಾ ಎಸಿ ಕೋಣೆಯಲ್ಲಿ ಮಲಗುತ್ತಿದ್ದ ದಿವ್ಯಾ ಹಾಗರಗಿ ನಿನ್ನೆ ತಡರಾತ್ರಿವರಗೆ ಫ್ಯಾನ್ ಕೆಳಗೆ ನಿದ್ರೆ ಬರದೆ ಪರದಾಡಿದ್ದಾರೆ. ಅಲ್ಲದೇ ನಿನ್ನೆ ಮಧ್ಯಾಹ್ನ ಊಟವನ್ನು ಕೂಡಾ ನಿರಾಕರಿಸಿದ್ದರು. ಆದರೆ ರಾತ್ರಿ ಸ್ವಲ್ಪ ಊಟ ಮಾಡಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ದೈಹಿಕ ಪರೀಕ್ಷೆಯಲ್ಲೂ ಅಕ್ರಮ – ದಿವ್ಯಾ ಬಂಧನ ಸರ್ಕಾರದ ದೊಡ್ಡ ಸಾಧನೆಯಲ್ಲ: ಪ್ರಿಯಾಂಕ್ ಖರ್ಗೆ

ಕೋಟಿ, ಕೋಟಿ ಹಣವಿದ್ದರೂ ಅಕ್ರಮದ ಜಾಲಕ್ಕೆ ಸಿಲುಕಿರುವ ದಿವ್ಯಾ ಹಾಗರಗಿ ಇದೀಗ ತಮ್ಮನ್ನು ಭೇಟಿಯಾದವರ ಮುಂದೆ ಪಶ್ಚಾತ್ತಾಪದ ಮಾತುಗಳನ್ನಾಡುತ್ತಿದ್ದಾರೆ. ಕಲಬುರಗಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ದಿವ್ಯಾ ಹಾಗರಗಿ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇವೆಲ್ಲವೂ ಪಿತ್ರಾರ್ಜಿತವಾಗಿ ಬಂದಿರುವ ಆಸ್ತಿಯಾಗಿದೆ.

Leave a Reply

Your email address will not be published.

Back to top button