ಶಿವಮೊಗ್ಗ: ನಗರದಲ್ಲಿ ಸದ್ಯ ಪರಿಸ್ಥಿತಿ ಕಂಟ್ರೋಲ್ ಗೆ ಬಂದಿದ್ದು, ನಾಳೆಯವರೆಗೂ ಕರ್ಫ್ಯೂ ಮುಂದುವರಿಸಲಾಗುವುದು ಎಂದು ಈಸ್ಟರ್ನ್ ರೇಂಜ್ ಡಿಐಜಿ ತ್ಯಾಗರಾಜನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ. ಅಲ್ಲದೆ ಕೆಲವರನ್ನ ವಶಕ್ಕೆ ಪಡೆಯಲಾಗಿದೆ. ಸಿಂಡಿಕೇಟ್ ಮಾಡಿ ಹತ್ಯೆ ನಡೆಸಿದ್ರಾ ಅನ್ನೋ ಬಗ್ಗೆ ಕೂಡ ವಿಚಾರಣೆ ಮಾಡ್ತಿದ್ದೇವೆ. ಬಂಧಿತ ಆರೋಪಿಗಳ ಮೇಲೆ ಈ ಹಿಂದೆ ಕೆಲವು ಕೇಸ್‍ಗಳಿವೆ ಎಂದು ತಿಳಿಸಿದರು.
ಶಿವಮೊಗ್ಗದ ವಾತಾವರಣವನ್ನ ನಾಳೆವರೆಗೆ ನೋಡಲಾಗುತ್ತದೆ. ಆ ಬಳಿಕ 144 ಸೆಕ್ಷನ್ ಮುಂದುವರಿಸಬೇಕಾ ಬೇಡ್ವಾ ಅಂತಾ ತೀರ್ಮಾನ ಮಾಡಲಾಗುತ್ತೆ. ಎಲ್ಲಾ ಕಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಐಪಿಸಿ 120 ಬಿ ಹಾಕದಿರುವ ಬಗ್ಗೆ ಮುಂದಿನ ಹಂತದಲ್ಲಿ ನೋಡ್ತೀವಿ. ಕಲ್ಲು ತೂರಾಟ, ಸಮಾಜದ ಸ್ವಾಸ್ಥ್ಯ ಹಾಳು ಮಾಡಿದವರ ಮೇಲೆ ಎಫ್‍ಐಆರ್ ಮಾಡಿ ಕಠಿಣ ಕ್ರಮ ಕೈಗೊಳ್ತೀವಿ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮುಸ್ಲಿಮರೇ ಹರ್ಷನನ್ನು ಹೊಡೆದಿರೋದು ಸಾಬೀತಾಗಿದೆ: ಈಶ್ವರಪ್ಪ
ಇದೇ ವೇಳೆ ಎಸ್‍ಪಿ ಲಕ್ಷ್ಮಿಪ್ರಸಾದ್ ಮಾತನಾಡಿ, ನಿನ್ನೆ ಗಲಭೆಗೆ ಸಂಬಂಧಿಸಿದಂತೆ 9 ಪ್ರಕರಣಗಳು ದಾಖಲಾಗಿವೆ. ಇಬ್ಬರು ಕೊಲೆ ಆರೋಪಿಗಳನ್ನು ಬಂಧಿಸಿಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ. ಜಿಲ್ಲೆಯಾದ್ಯಂತ 50 ಚೆಕ್ ಪೋಸ್ಟ್ ಮಾಡಲಾಗಿದೆ. ಚಿಕ್ಕಮಗಳೂರು, ದಾವಣಗೆರೆ ಹಾಗೂ ಬೆಂಗಳೂರಿನಿಂದ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಂಡಿದ್ದೇವೆ ಎಂದರು. ಇದನ್ನೂ ಓದಿ: ಮಗ ಕೇಸರಿ ಶಾಲು, ಕುಂಕುಮ ಮಾತ್ರ ಬಿಟ್ಟು ಹೋಗಿದ್ದಾನೆ: ಹರ್ಷ ತಾಯಿ
ಒಟ್ಟಿನಲ್ಲಿ ಶಿವಮೊಗ್ಗದಲ್ಲಿ ಕಫ್ರ್ಯೂ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೊರ ಜಿಲ್ಲೆಯಿಂದ ಶಿವಮೊಗ್ಗಕ್ಕೆ ಬರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಎಸ್‍ಪಿ ಲಕ್ಷ್ಮಿಪ್ರಸಾದ್ ಅವರು ಸಿಟಿ ರೌಂಡ್ಸ್ ಮಾಡುತ್ತಿದ್ದಾರೆ. ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಜನರನ್ನು ಮನೆಗೆ ಕಳುಹಿಸುತ್ತಿದ್ದಾರೆ. ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.