– ಝೀರೋ ಟ್ರಾಫಿಕ್ ಮೂಲಕ ಕರೆತಂದ ಅಧಿಕಾರಿಗಳು
ಮಂಗಳೂರು: ಟಿಬೆಟಿಯನ್ ಧರ್ಮ ಗುರು ದಲೈ ಲಾಮಾ ಅವರು ಇಂದು ಮಂಗಳೂರಿಗೆ ಆಗಮಿಸಿದ್ದು, ಮೂರು ದಿನಗಳ ಕಾಲ ಮಂಗಳೂರಿನಲ್ಲಿಯೇ ತಂಗಲಿದ್ದಾರೆ.
ದಲೈ ಲಾಮಾ ಆಗಮಿಸುವ ಸೂಚನೆ ತಿಳಿದಿದ್ದರಿಂದ ಮಂಗಳೂರು ವಿಮಾನ ನಿಲ್ದಾಣದ ಹೊರಗಡೆ ಟಿಬೆಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕ ಅವರನ್ನು ಸ್ವಾಗತಿಸಲಾಯಿತು. ಅಲ್ಲದೆ ವಿಮಾನ ನಿಲ್ದಾಣದ ಸುತ್ತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್‍ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆಯಲ್ಲಿ ಝೀರೋ ಟ್ರಾಫಿಕ್ ಮೂಲಕ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು.
ಆಗಸ್ಟ್ 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯಲಿರುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲಿದ್ದು, 31 ರಂದು ಅವರು ಬೆಂಗಳೂರಿಗೆ ತೆರಳಲಿದ್ದಾರೆ.
ಮಧ್ಯಾಹ್ನ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತ ಅರುಣಾಂಶು ಗಿರಿ, ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.