ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ (Mysuru-Kodagu Lok Sabha) ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಏ.3 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಯದುವೀರ್, ಏ.3 ರಂದು ಬೆಳಗ್ಗೆ 10:30 ಕ್ಕೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಾಗುವುದು. ದೊಡ್ಡ ಸಂಖ್ಯೆಯಲ್ಲಿ ಬಂದು ಸೇರುವಂತೆ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ತಾರೆ: ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ‘ಕೈ’ ಶಾಸಕ ಅನುಮಾನ
Advertisement
The date for the filing of my nomination has been fixed on the 3rd of April at 10:30am. The program will start at the Kote Anjaneya Swamy Temple and proceed to the venue for filing.
I appeal to all people of Mysore-Kodagu to attend the event and bless us with your presence pic.twitter.com/gYHG087A4k
— Yaduveer Wadiyar (@yaduveerwadiyar) March 30, 2024
Advertisement
ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮೆರವಣಿಗೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಸ್ಥಳಕ್ಕೆ ತೆರಳಲಿದೆ. ಮೈಸೂರು-ಕೊಡಗಿನ ಸಮಸ್ತ ಜನತೆ ಈ ಕಾರ್ಯಕ್ರಮಕ್ಕೆ ಆಗಮಿಸಿ ನಿಮ್ಮ ಉಪಸ್ಥಿತಿಯಿಂದ ನಮ್ಮನ್ನು ಆಶೀರ್ವದಿಸಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
Advertisement
Advertisement
ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದೇ ಕ್ಷೇತ್ರದಲ್ಲಿ ಎರಡು ಬಾರಿ ಸಂಸದರಾಗಿ ಕಾರ್ಯನಿರ್ವಹಿಸಿದ್ದ ಸಂಸದ ಪ್ರತಾಪ್ ಸಿಂಹ ಅವರಿಗೆ ಮೂರನೇ ಬಾರಿಗೆ ಟಿಕೆಟ್ ಮಿಸ್ ಆಗಿದೆ. ಇದನ್ನೂ ಓದಿ: ತನ್ನ ಸೋಲಿನ ಸೇಡು ತೀರಿಸಿಕೊಳ್ಳಲು ಅಪ್ಪನ ಗೆಲುವಿಗೆ ಮಗನ ಪಣ