ಬೆಂಗಳೂರು: ಕಾಂತರಾಜು ಕಮಿಟಿ ವರದಿ (Kantharaju Committee Report) ಜಾರಿಗೆ ಒತ್ತಾಯಿಸಿ ಜನವರಿ 28 ರಂದು ಬೃಹತ್ ಅಹಿಂದಾ ಸಮಾವೇಶ (Ahinda Convention) ನಡೆಸಲು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ (Exploited and Backward Classes) ನಿರ್ಧರಿಸಿದೆ.
ಕೋಟೆ ನಾಡು ಚಿತ್ರದುರ್ಗದಲ್ಲಿ (Chitradurga) ಸಮಾವೇಶ ನಡೆಯಲಿದೆ. ಈ ಹಿಂದೆ ಡಿಸೆಂಬರ್ 30ಕ್ಕೆ ಸಮಾವೇಶ ನಿಗದಿಯಾಗಿತ್ತು. ಅಂತಿಮವಾಗಿ ಜನವರಿ 28ರಂದು ಅಹಿಂದಾ ಸಮಾವೇಶ ಆಯೋಜನೆಗೆ ತೀರ್ಮಾನ ಮಾಡಲಾಗಿದೆ. ಶೋಷಿತರ ಜಾಗೃತಿ ಸಮಾವೇಶ ಎಂಬ ಹೆಸರಿನಡಿಯಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದ್ದು, ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಇದನ್ನೂ ಓದಿ: ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ
Advertisement
Advertisement
ಪ್ರಬಲ ಸಮುದಾಯಗಳ ವಿರೋಧಕ್ಕೆ ಸೆಡ್ಡು ಹೊಡೆಯಲು ಸಮಾವೇಶ ಆಯೋಜಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಸಮಾವೇಶಕ್ಕೆ ಆಹ್ವಾನಿಸಲು ತೀರ್ಮಾನಿಸಲಾಗಿದೆ. ಅಲ್ಪಸಂಖ್ಯಾತ, ದಲಿತ, ಎಸ್‌ಸಿ, ಎಸ್‌ಟಿ ರಾಜಕೀಯ ನಾಯಕರಿಗೂ ಆಹ್ವಾನ ನೀಡಲು ತೀರ್ಮಾನಿಸಲಾಗಿದ್ದು, ಈ ಮೂಲಕ ಅಹಿಂದಾ ವರ್ಗ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಇದನ್ನೂ ಓದಿ: ವಾಹನ ಸವಾರರಿಗೆ ತೆಲಂಗಾಣ ಸರ್ಕಾರ ಬಂಪರ್ ಆಫರ್; ದಂಡ ಪಾವತಿಗೆ ಶೇ.60-90 ಡಿಸ್ಕೌಂಟ್
Advertisement
Advertisement
ಅಹಿಂದಾ ಸಮಾವೇಶದ ಹಕ್ಕೊತ್ತಾಯಗಳು ಏನು?
* ಹೆಚ್. ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿ ಯಥವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು.
* ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು.
* EWS 10% ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸುವುದು.
* ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳ ಮೀಸಲಾತಿ ಕಲ್ಪಿಸಬೇಕು.
* ರಾಜಕೀಯ ಮೀಸಲಾತಿಯನ್ನು ಲೋಕಸಭೆ, ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು
* ಜನಸಂಖ್ಯೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲಾತಿ ವಿಸ್ತರಿಸಬೇಕು.
ಈ ಎಲ್ಲಾ ಹಕ್ಕೊತ್ತಾಯದೊಂದಿಗೆ ಅಹಿಂದ ಸಮಾವೇಶಕ್ಕೆ ನಿರ್ಧರಿಸಲಾಗಿದೆ. ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಕುತೂಹಲ ಮೂಡಿಸಿದೆ. ತಾಂತ್ರಿಕವಾಗಿ ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿ ಭಾಗವಹಿಸುವುದು ಕಷ್ಟ. ಆದ್ದರಿಂದ ಈ ಬೃಹತ್ ಸಮಾವೇಶದಲ್ಲೇ ಎರಡನೇ ಬಾರಿಗೆ ಮುಖ್ಯಮಂತ್ರಿ ಆದ ಸಿದ್ದರಾಮಯ್ಯ ಅವರಿಗೆ ಬೃಹತ್ ಅಭಿನಂದನೆ ಹಾಗೂ ಸನ್ಮಾನ ಮಾಡುವ ಬಗ್ಗೆಯೂ ಅಹಿಂದ ವರ್ಗದ ನಾಯಕರು ಚಿಂತನೆ ನಡೆಸಿದ್ದಾರೆ. ಸಮಾವೇಶದಲ್ಲೇ ಸಿದ್ದರಾಮಯ್ಯ ಅವರಿಗೆ ಸನ್ಮಾನ ಇಟ್ಟುಕೊಂಡು ಆಹ್ವಾನಿಸುವ ಬಗ್ಗೆ ಚರ್ಚೆ ನಡೆದಿದೆ. ಆದರೆ ಇದು ಯಾವುದಕ್ಕೂ ಸಿಎಂ ಸಿದ್ದರಾಮಯ್ಯ ಇದುವರೆಗೆ ಸಮ್ಮತಿ ನೀಡಿಲ್ಲ. ಇದನ್ನೂ ಓದಿ: ಇಂಗ್ಲಿಷ್ ಬೋರ್ಡ್‍ಗಳು ಉಡೀಸ್- ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಒತ್ತಾಯ