ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತರೊಬ್ಬರು ವಿದ್ಯುತ್ ತಂತಿ ತುಳಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ನಡೆದಿದೆ.
65 ವರ್ಷದ ಹಣಮಂತ ಡೊಣ್ಣೆಗೌಡ ಮೃತ ರೈತ. ಹಣಮಂತ ಅವರು ಪ್ರತಿ ದಿನದಂತೆ ಇಂದು ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದರು. ಸೋಮವಾರ ರಾತ್ರಿ ಗ್ರಾಮದಲ್ಲಿ ಭಾರೀ ಗಾಳಿ ಬೀಸಿದ್ದರಿಂದ ವಿದ್ಯುತ್ ತಂತಿ ತುಂಡಾಗಿ ಜಮೀನಿನಲ್ಲಿ ಬಿದ್ದಿದೆ.
ವಿದ್ಯುತ್ ಪ್ರವಹಿಸುತ್ತಿರುವ ತಂತಿಯನ್ನ ಗಮನಿಸದ ರೈತ ಹಣಮಂತ ಅದನ್ನ ತುಳಿದು ಸಾವನ್ನಪ್ಪಿದ್ದಾರೆ. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.