ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಸರಣಿ ಭೂಕುಸಿತಗಳಿಗೆ ಬಲಿಯಾದವರ ಸಂಖ್ಯೆ 1127ಕ್ಕೆ ದಾಟಿದೆ. ಇನ್ನೂ 4 ಸಾವಿರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಆ ಪೈಕಿ 580ಕ್ಕೂ ಹೆಚ್ಚು ವಿದೇಶಿಗರು ಸೇರಿದ್ದಾರೆ.
ರಕ್ಷಣಾ ಪಡೆಗಳು ಹಾಗೂ ಹೆಲಿಕಾಪ್ಟರ್‌ಗಳು ಕಡಿದಾದ ಪ್ರದೇಶಗಳನ್ನು ತಲುಪಲು ಯಶಸ್ವಿಯಾಗಿದ್ದು, ಸಂತ್ರಸ್ತರನ್ನು ರಕ್ಷಿಸುವ ಮತ್ತು ಪರಿಹಾರ ಸಾಮಗ್ರಿಗಳನ್ನು ತಲುಪಿಸುವ ಕಾರ್ಯಾಚರಣೆ ತೀವ್ರಗೊಂಡಿದೆ. ಇದನ್ನೂ ಓದಿ: ಶಾಲೆಯಲ್ಲೇ ಹೃದಯಾಘಾತ; 9ನೇ ತರಗತಿ ವಿದ್ಯಾರ್ಥಿ ದಾರುಣ ಸಾವು
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಪ್ರವಾಹ ಪೀಡಿತ ಪ್ರದೇಶಗಳಿಂದ ಒಟ್ಟು 163 ಭಾರತೀಯರನ್ನು ರಕ್ಷಿಸಲಾಗಿದೆ. ಇಂದು ಚೀನಾದಲ್ಲಿದ್ದ 151 ಭಾರತೀಯರನ್ನು ರಕ್ಷಿಸಲಾಗಿದ್ದು, ಅವರನ್ನು ಕರೆತರುವ ಕೆಲಸ ನಡೆಯುತ್ತಿದೆ. ರಕ್ಷಣೆ ಹಾಗೂ ತಾಂತ್ರಿಕ ಬೆಂಬಲಕ್ಕಾಗಿ ಭಾರತವು ತಜ್ಞರ ತಂಡಗಳನ್ನು ನೇಪಾಳಕ್ಕೆ ರವಾನಿಸಿದೆ.
ಪ್ರವಾಹದಲ್ಲಿ ಮೃತಪಟ್ಟವರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿ, ತಪಾಸಣೆ ನಡೆಸಲು ಭಾರತೀಯ ತಂಡವು ನೇಪಾಳಕ್ಕೆ ಪೂರ್ಣ ಸಹಕಾರ ನೀಡುತ್ತಿದೆ. ಭೂಕುಸಿತದಿಂದಾಗಿ ಹೆದ್ದಾರಿಗಳು ಮತ್ತು ಸೇತುವೆಗಳು ಕೊಚ್ಚಿಹೋಗಿದ್ದರಿಂದ ಈವರೆಗೆ ತಲುಪಲಾಗದಿದ್ದ ದುರ್ಗಮ ಪ್ರದೇಶಗಳಿಗೆ ನೇಪಾಳಿ ಸೇನೆ, ಸಶಸ್ತ್ರ ಪೊಲೀಸ್ ಪಡೆ ಹಾಗೂ ಭಾರತ ಸೇರಿದಂತೆ ಅಂತಾರಾಷ್ಟ್ರೀಯ ರಕ್ಷಣಾ ಪಡೆಗಳು ಹೆಲಿಕಾಪ್ಟರ್‌ಗಳ ಮೂಲಕ ತಲುಪಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ.ಇದನ್ನೂ ಓದಿ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಚಲಿಸುತ್ತಿದ್ದ ಟಿಪ್ಪರ್‌ನಲ್ಲಿ ಆಕಸ್ಮಿಕ ಬೆಂಕಿ
