ಯಶ್ ಹುಟ್ಟು ಹಬ್ಬದ ದಿನದಂದು ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಗೆ ಬಲಿಯಾದ ಅಭಿಮಾನಿಗಳ ಕುಟುಂಬಕ್ಕೆ ಯಶ್ ತಲಾ ಐದು ಲಕ್ಷ ರೂಪಾಯಿ ನೀಡಿದ್ದಾರೆ. ಈ ಮೂಲಕ ಮಾತು ಉಳಿಸಿಕೊಂಡಿದ್ದಾರೆ. ಈ ಘಟನೆ ನಡೆದ 11 ದಿನವಾಗಿದ್ದು, ಇಂದು ಅವರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಗನನ್ನು ನೆನೆದು ಕಣ್ಣೀರಿಟ್ಟ ಪಾಲಕರು, ಯಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅವರನ್ನು ನನ್ನ ಮಗ ಎನ್ನಲೋ, ದೇವರು ಎನ್ನಲೋ ಗೊತ್ತಾಗುತ್ತಿಲ್ಲ ಎಂದಿದ್ದಾರೆ.
Advertisement
ಒಂದು ಕಡೆ ಯಶ್ ಪರಿಹಾರವನ್ನು ನೀಡಿದ್ದರೆ ಮತ್ತೊಂದು ಕಡೆ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದಾರೆ. ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ (Suranagi Village) ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.
Advertisement
Advertisement
ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
Advertisement
ನಡೆದಿದ್ದೇನು..?: ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬ (Yash Birthday) ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯರತ್ರಿಯಲ್ಲಿ ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿತ್ತು. ಈ ವಚಾರ ತಿಳಿಯುತಿದ್ದಂತೆಯೇ ನಟ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಆಸ್ಪತ್ರೆಗೂ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಇನ್ಮುಂದೆ ಯಾರೂ ನನ್ನ ಕಟೌಟ್ ಹಾಕಬೇಡಿ ಎಂದು ಅಭಿಮಾನಿಗಳಲ್ಲಿ ಯಶ್ ಮನವಿ ಮಾಡಿಕೊಂಡರು.