ಕಲಬುರಗಿ: ಬೀದರ್-ಕಲಬುರಗಿ ಲೋಕಸಭಾ ಮತಕ್ಷೇತ್ರವಾಗಲಿ ಅಥವಾ ರಾಜ್ಯದ ಯಾವುದೇ ಕ್ಷೇತ್ರವಿರಲಿ, ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಜೆಪಿ (BJP) ಹೈಕಮಾಂಡ್ (High Command) ನಿರ್ಧಾರವೇ ಅಂತಿಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ತಿಳಿಸಿದರು.
ಶನಿವಾರ ನಗರದ ರೈಲು ನಿಲ್ದಾಣದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ವಾಸ್ತವಿಕ ಪರಿಸ್ಥಿತಿ ಅರ್ಥ ಮಾಡಿಕೊಂಡು ತಮ್ಮ ನಿರ್ಧಾರ ವಾಪಸ್ ಪಡೆಯಲಿದ್ದಾರೆ. ನಮ್ಮ ಹಿರಿಯರು ಅದರ ಬಗ್ಗೆ ಗಮನಿಸುತ್ತಾರೆ. ನಮ್ಮ ನಾಯಕರು ಅವರೊಂದಿಗೆ ಮಾತುಕತೆ ನಡೆಸಿದ್ದು, ಮನವೊಲಿಸುವ ಪ್ರಯತ್ನ ನಡೆಡಿದೆ. ಈಶ್ವರಪ್ಪ ಅವರು ಪಕ್ಷದ ವಿರುದ್ಧ ಹೋಗುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? – ಸಿಎಂ
Advertisement
Advertisement
ಮತ್ತೊಮ್ಮೆ ಮೋದಿ ಸಂಕಲ್ಪ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾತನಾಡುವ ಮೂಲಕ 2024ರ ಲೋಕಸಭಾ ಚುನಾವಣಾ (Lok Sabha Election) ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 7ನೇ ವೇತನ ಆಯೋಗದ ಶಿಫಾರಸುಗಳಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 17,500 ಕೋಟಿ ಹೊರೆ: ಸುಧಾಕರ್ ರಾವ್ ಸ್ಪಷ್ಟನೆ
Advertisement