ನವದೆಹಲಿ: ಕಾವೇರಿ ನೀರು (Kaveri Water) ವಿಚಾರದಲ್ಲಿ ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ಣಯ ದುರಂತ. ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡರು ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು (HD Deve Gowda) ಹೇಳಿದ್ದಾರೆ.
ತಮಿಳುನಾಡಿಗೆ (Tamil Nadu) ನಿತ್ಯ 5,000 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ವಿಚಾರವಾಗಿ ನವದೆಹಲಿಯಲ್ಲಿ (New Delhi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ. ಇವತ್ತಿನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮಹತ್ತರವಾದ ಪೆಟ್ಟು. ಬೆಂಗಳೂರಿಗೆ (Bengaluru) ಕುಡಿಯುವ ನೀರು ಬೇಕು. ಮುಂದೇನು ಆಗುತ್ತೆ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳು ಸೇರ್ಪಡೆ
ನಾವು ಎಲ್ಲೋ ಒಂದು ಕಡೆ ಎಡವಿದ್ದೇವೆ. ನಮ್ಮ ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯಕ್ಕೆ ಮೊದಲು ಧರಣಿ ಮಾಡಿದ್ದೆ. ಧರಣಿ ಕೂತು ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೇವೆ. ಇಂದು ಸದನದಲ್ಲಿ ಕಾವೇರಿ ವಿಚಾರ ಎತ್ತಿದ್ದೇನೆ. ಕರ್ನಾಟಕ, ತಮಿಳುನಾಡಿಗೆ ಸಂಬಂಧ ಇಲ್ಲದ ಅಧಿಕಾರಿಗಳನ್ನು ಗ್ರೌಂಡ್‌ಗೆ ಕಳುಹಿಸಲಿ. ವಾಸ್ತವಿಕ ವರದಿಯನ್ನು ಅಧಿಕಾರಿಗಳ ತಂಡ ಸಲ್ಲಿಸಲಿ. ನಾವು ಒಪ್ಪಿಕೊಳ್ಳುತ್ತೇವೆ, ಆದರೆ ತಮಿಳುನಾಡು ಒಪ್ಪಿಕೊಳ್ಳುತ್ತಿಲ್ಲ. ತಮಿಳುನಾಡಿನ ರಾಜಕಾರಣಿಗಳಲ್ಲಿ ಒಗ್ಗಟ್ಟು ಇದೆ. ನಮ್ಮ ರಾಜಕಾರಣಿಗಳಲ್ಲಿ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಹಳೆ ಸಂಸತ್ ಭವನಕ್ಕೆ ಬೀಳ್ಕೊಡುಗೆ – ನೆಹರೂ ಸ್ಮರಿಸಿದ ಪ್ರಧಾನಿ ಮೋದಿ
ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನ್ಯಾವತ್ತೂ ಪ್ರತ್ಯೇಕವಾಗಿ ಪ್ರಧಾನಿಯನ್ನು ಭೇಟಿಯಾಗಲ್ಲ. ಇಂಡಿಯಾ (INDIA) ಸಭೆಗೆ ಕರೆಯುವುದೇ ಬೇಡ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಿತೀಶ್ ಕುಮಾರ್‌ಗೆ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಮೈತ್ರಿ ವಿಚಾರವಾಗಿ ನಾನು ಯಾರನ್ನೂ ಭೇಟಿಯಾಗಲ್ಲ. ಚರ್ಚೆಗೆ ಬಂದಾಗ ಮಾತನಾಡುತ್ತೇವೆ. ಈಗ ಎಲ್ಲಿದ್ದೇವೆ ಅಲ್ಲೇ ಇರುತ್ತೇವೆ. ಈಗ ಮೈತ್ರಿ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದರು. ಇದನ್ನೂ ಓದಿ: ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ – ತ.ನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಆದೇಶ
Web Stories