ಬೆಂಗಳೂರು: ರಾಜಾಜಿನಗರದ ಇಎಸ್‍ಐ ಆಸ್ಪತ್ರೆಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಯ ಕಾರ್ಡಿಯಾಲಜಿ ವಿಭಾಗವನ್ನು ಬನ್ನೇರುಘಟ್ಟಕ್ಕೆ ಸ್ಥಳಾಂತರ ಮಾಡುವ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಉಪಾಧ್ಯಕ್ಷರಾದ ಬಿ.ಟಿ.ನಾಗಣ್ಣ ಆಗ್ರಹಿಸಿದರು.
Advertisement
ರಾಜಾಜಿನಗರದ ಎಎಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2011-12ರಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ರಾಜಾಜಿನಗರದ ಇಎಸ್‍ಐ ಆಸ್ಪತ್ರೆಯೊಂದಿಗೆ ಎಂಒಯು ಮಾಡಿಕೊಂಡಿದೆ. ಆ ಪ್ರಕಾರ ಇಎಸ್‍ಐ ಆಸ್ಪತ್ರೆಯಲ್ಲಿ ವಾರ್ಷಿಕ 15 ಕೋಟಿ ರೂ. ಮೊತ್ತದ ವಹಿವಾಟು ನಡೆಯಬೇಕಿತ್ತು. ಆದರೆ ಪ್ರಚಾರದ ಕೊರತೆಯಿಂದಾಗಿ ಇತ್ತೀಚಿನ ಕೆಲವು ವರ್ಷಗಳಲ್ಲಿ ಆ ಗುರಿ ತಲುಪಲು ಇಎಸ್‍ಐಗೆ ಸಾಧ್ಯವಾಗುತ್ತಿಲ್ಲ. ಇದನ್ನು ನೆಪ ಮಾಡಿಕೊಂಡು, ಅಲ್ಲಿರುವ ಜಯದೇವ ಆಸ್ಪತ್ರೆಯ ಹೃದ್ರೋಗ ವಿಭಾಗವನ್ನು ಸ್ಥಳಾಂತರಿಸಲು ಹೊರಟಿರುವುದು ಖಂಡನೀಯ ಎಂದು ಹೇಳಿದರು. ಇದನ್ನೂ ಓದಿ: ಅದ್ಧೂರಿಯಾಗಿ ಬೀದಿ ನಾಯಿಯ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ ಸ್ನೇಹಿತರು
Advertisement
Advertisement
ಇಎಸ್‍ಐ ಆಸ್ಪತ್ರೆಯ ಸೌಲಭ್ಯಗಳು ಪ್ರಸ್ತುತ ಕಾರ್ಮಿಕರಿಗೆ ಸೀಮಿತವಾಗಿದೆ. ಅಲ್ಲಿನ ಸೌಲಭ್ಯಗಳನ್ನು ಸಾರ್ವಜನಿಕರಿಗೂ ವಿಸ್ತರಿಸಬೇಕು. ರಾಜಾಜಿನಗರ, ಮಲ್ಲೇಶ್ವರಂ ಹಾಗೂ ಸುತ್ತಮುತ್ತಲಿನ ಜನರಿಗೆ ಇದರಿಂದ ಉಪಯೋಗವಾಗುತ್ತದೆ. ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಕುರಿತು ಪ್ರಚಾರ ಮಾಡದಿದ್ದರೆ ಹೇಗೆ ತಾನೇ ರೋಗಿಗಳಿಗೆ ತಿಳಿಯುತ್ತೆ ಎಂದು ಪ್ರಶ್ನಿಸಿದರು. ಇನ್ನಾದರೂ ಜನರಿಗೆ ಮಾಹಿತಿ ನೀಡುವ ಕೆಲಸವನ್ನು ಆಸ್ಪತ್ರೆ ಮಾಡಬೇಕು. ಕೋವಿಡ್ ಆತಂಕವಿರುವ ಈ ಸಂದರ್ಭದಲ್ಲಿ ಆಸ್ಪತ್ರೆಗಳನ್ನು ಇನ್ನಷ್ಟು ಆಧುನೀಕರಣಗೊಳಿಸಲು ಮುಂದಾಗಬೇಕು. ಬದಲಾಗಿ, ಇರುವ ಸೌಲಭ್ಯಗಳನ್ನೂ ಕಿತ್ತುಕೊಳ್ಳುವುದು ತಪ್ಪಾಗುತ್ತೆ ಎಂದರು. ಇದನ್ನೂ ಓದಿ: ಪೆಟ್ರೋಲ್ ಸುರಿದು ಪತಿಯನ್ನು ಹತ್ಯೆಗೈದು ಚರಂಡಿಗೆ ಶವ ಎಸೆದ್ಳು
Advertisement
ಬುಧವಾರ ಪ್ರತಿಭಟನೆ!
ರಾಜಾಜಿನಗರದ ಇಎಸ್‍ಐ ಆಸ್ಪತ್ರೆಯಲ್ಲಿರುವ ಹೃದ್ರೋಗ ವಿಭಾಗವನ್ನು ಬನ್ನೇರುಘಟ್ಟಕ್ಕೆ ಸ್ಥಳಾಂತರ ಮಾಡುವುದನ್ನು ಖಂಡಿಸಿ ಆಸ್ಪತ್ರೆಯ ಎದುರು ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸೆ.15 ರಂದು ನೂರಾರು ಕಾರ್ಯಕರ್ತರೊಂದಿಗೆ ಎಎಪಿಯ ಬೆಂಗಳೂರು ಘಟಕವು ಪ್ರತಿಭಟನೆ ನಡೆಸಿ, ನಿರ್ಧಾರವನ್ನು ಹಿಂಪಡೆಯಬೇಕೆಂದು ನಮ್ಮ ಪಕ್ಷ ಆಗ್ರಹಿಸಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಸರ್ಕಾರದಿಂದ ಲವ್ ಲೆಟರ್ ಬಂದಿದೆ – ಆಪ್ ನಾಯಕ
ಸುದ್ದಿಗೋಷ್ಠಿಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಎಎಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಉಪಸ್ಥಿತರಿದ್ದರು.