ಹುಬ್ಬಳ್ಳಿ: ಅಪರೂಪದ ಶಸ್ತ್ರ ಚಿಕಿತ್ಸೆವೊಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರು 28 ವರ್ಷದ ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್‍ವೊಂದನ್ನು ಹೊರ ತೆಗೆದಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್ ಬಳಿಯ ಹಿರೂರು ಗ್ರಾಮದ ಗೃಹಿಣಿ ವಿನೋದಾ ತಳವರ್ (28) ಅವರ 4 ವರ್ಷದ ಮಗಳು ಆ. 14ರಂದು ಬೆಳಗ್ಗೆ ಹಲ್ಲು ಉಜ್ಜುವಾಗ ಇದ್ದಕ್ಕಿದ್ದಂತೆ ಟೂತ್ ಬ್ರಶ್, ಆಕೆಯ ತಾಯಿಯ ಎಡಗಣ್ಣಿನ ಕೆಳಗೆ ಸಿಲುಕಿದೆ. ನಂತರ ಕುಟುಂಬ ಸದಸ್ಯರು ಅದನ್ನು ತೆಗೆಯಲು ಪ್ರಯತ್ನಿಸಿದಾಗ ಬ್ರಶ್ ಮುರಿದಿದೆ.
Advertisement
Advertisement
ಕುಟುಂಬಸ್ಥರು ಕೂಡಲೇ ಮಹಿಳೆಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೋಗಿಯನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಶಿಫಾರಸ್ಸು ಮಾಡಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಮಹಿಳೆಯನ್ನು ದಾಖಲಿಸಲಾಗಿತ್ತು. ವೈದ್ಯರು ಮುಖದ ಸಿಟಿ ಸ್ಕ್ಯಾನ್, ಸಿಟಿ ಆಂಜಿಯೋಗ್ರಾಮ್ ಮಾಡಿದಾಗ ಕಣ್ಣಿನ ಕೆಳಗೆ ಬ್ರಶ್ ಸಿಲುಕಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಪರಿಶಿಷ್ಟ ಜಾತಿಗೆ ಸೇರಿದವಳೆಂದು ತಿಳಿದು ಆಕೆ ದೇಹ ಮುಟ್ಟುತ್ತಾನೆಂಬುದು ನಂಬಲಸಾಧ್ಯ: ಕೋರ್ಟ್
Advertisement
ಸ್ಕ್ಯಾನ್ ವರದಿ ತನಿಖೆ ವೇಳೆ ಎಡಗಣ್ಣು ಸಂಪೂರ್ಣವಾಗಿ ಹಾನಿಯಾಗಿರುವುದು ಕಂಡುಬಂದಿತ್ತು. ನಂತರ ನೇತ್ರಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಕೂಡಲೇ ಶಸ್ತ್ರ ಚಿಕಿತ್ಸೆ ಮಾಡಲು ನಿರ್ಧರಿಸಿದ್ದಾಗಿ ಹಿರಿಯ ವೈದ್ಯರೊಬ್ಬರು ತಿಳಿಸಿದರು. ಇದನ್ನೂ ಓದಿ: ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಫ್ಯಾಮಿಲಿ ಆತ್ಮಹತ್ಯೆಗೆ ಶರಣು
Advertisement
ಸಂಪೂರ್ಣ ಅಧ್ಯಯನ ನಂತರ, ಬುಧವಾರ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಲಾಯಿತು. ಡಾ. ಮಂಜುನಾಥ್ ವಿಜಯಪುರ, ಡಾ. ವಸಂತ್ ಕಟ್ಟಿಮನಿ, ಡಾ. ಅನುರಾಧ ನಾಗನಗೌಡರ್, ಡಾ. ಸ್ಫೂರ್ತಿ ಶೆಟ್ಟಿ ಮತ್ತು ಅರವಳಿಕೆ ಮತ್ತು ನೇತ್ರಶಾಸ್ತ್ರ ವಿಭಾಗದ ಸಿಬ್ಬಂದಿಯ ನೆರವಿನಿಂದ ಬುಧವಾರ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.