ಬೆಂಗಳೂರು: ಅಯೋಧ್ಯೆಯಲ್ಲಿಂದು (Ayodhya) ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಇಡೀ ದೇಶವೇ ಈ ಸುಂದರ ಕ್ಷಣವನ್ನ ಕಣ್ತುಂಬಿಕೊಳ್ಳಲು ಕಾತರವಾಗಿದೆ. ರಾಮನೂರಿನ ಎಲ್ಲ ಬೀದಿ-ಬೀದಿಗಳು ತಳಿರು ತೋರಣಗಳಿಂದ ಅಲಂಕೃತಗೊಂಡಿದೆ. ಶತಮಾನಗಳ ಕನಸು ಇಂದು ನನಸಾಗುತ್ತಿದ್ದು, ಅಯೋಧ್ಯೆ ತುಂಬಾ ಸಂಭ್ರಮ ಮನೆ ಮಾಡಿದೆ. ರಾಜ್ಯದ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಸಹ ಪ್ರಾಣಪ್ರತಿಷ್ಠಾಪನೆಗೆ ಶುಭ ಹಾರೈಸಿದ್ದಾರೆ.
Advertisement
ಈ ಕುರಿತು ತಮ್ಮ X ಖಾತೆಯಲ್ಲಿ ಶುಭ ಸಂದೇಶ ಹಂಚಿಕೊಂಡಿರುವ ಡಿಸಿಎಂ, ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು (Congress Guarantee) ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಶತಮಾನಗಳ ಕನಸು ನನಸಾಗಲು ಕ್ಷಣಗಣನೆ – ಅಯೋಧ್ಯೆ ಬಾಲರಾಮನಿಗೆ ಮೊದಲ ಮಜ್ಜನ
Advertisement
Advertisement
ಬಾಲರಾಮನಿಗೆ ಮೊದಲ ಮಜ್ಜನ: ಅಯೋಧ್ಯೆಯ ಗರ್ಭಗುಡಿ ಪ್ರವೇಶಿಸಿರುವ ರಾಮಲಲ್ಲಾ ಮೂರ್ತಿಗೆ (Ram Lalla Idol) ಸೋಮವಾರ ಮೊದಲ ಬಾರಿಗೆ ಸ್ನಾನ ಮಾಡಿಸಲಾಗಿದೆ. ಸುಮಾರು 114 ತೀರ್ಥಕ್ಷೇತ್ರಗಳಿಂದ ತಂದ ನೀರಿನಲ್ಲಿ ರಾಮಲಲ್ಲಾ ಮೂರ್ತಿಗೆ ಮಹಾಮಜ್ಜನ ಮಾಡಿಸಲಾಗಿದೆ. ಇದನ್ನೂ ಓದಿ: 33,258 ಹಣತೆಗಳಲ್ಲಿ ಬೆಳಗಿದ `ಸಿಯಾವರ್ ರಾಮಚಂದ್ರ ಕೀ ಜೈ’ ಘೋಷ!
Advertisement
ಅಯೋಧ್ಯೆಯಲ್ಲಿಂದು ಮೋದಿ ಕಾರ್ಯಕ್ರಮಗಳೇನು?
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
ಬೆಳಗ್ಗೆ 10.55: ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್
ಬೆಳಗ್ಗೆ 11 ರಿಂದ ಮಧ್ಯಾಹ್ನ 12: ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55: ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2: ನರೇಂದ್ರ ಮೋದಿ, ಮೋಹನ್ ಭಾಗವತ್, ಯೋಗಿ ಆದಿತ್ಯನಾಥ್ ಸಾರ್ವಜನಿಕ ಭಾಷಣ
ಮಧ್ಯಾಹ್ನ 2.10: ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30: ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ
ಖ್ಯಾತ ನಟರ ಆಗಮನ:
ಅಮಿತಾಬ್ ಬಚ್ಚನ್, ಚಿರಂಜೀವಿ, ರಾಮ್‌ಚರಣ್, ಪವನ್ ಕಲ್ಯಾಣ್ ಸೇರಿದಂತೆ ಅನೇಕ ನಟ ನಟಿಯರು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ಕ್ರೀಡಾ ತಾರೆಗಳಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ವೆಂಕಟೇಶ್ ಪ್ರಸಾದ್, ಆರ್.ಅಶ್ವಿನ್, ಸೈನಾ ನೆಹ್ವಾಲ್ ಸೇರಿದಂತೆ ಅನೇಕರು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ಗಣ್ಯರ ಸಮ್ಮುಖದಲ್ಲಿ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.