ಚಿಕ್ಕಬಳ್ಳಾಪುರ: ಚುನಾವಣಾ ಆಯೋಗದ ಮೇಲೆ ಬಿಜೆಪಿ (BJP) ನಿಯಂತ್ರಣವಿದ್ದು, ಚುನಾವಣಾ ಆಯೋಗವನ್ನು (ECI) ಜ್ಞಾನೇಶ್ ಕುಮಾರ್ (Gyanesh Kumar) ಮತ್ತು ಬಿಜೆಪಿ ಹೈಜಾಕ್ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದ 19 ರಾಜ್ಯಗಳಲ್ಲಿ 13 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ. ಕರ್ನಾಟಕದಲ್ಲೂ 1.48 ಕೋಟಿ ಡಿಲೀಟ್ ಮಾಡಲಾಗಿದೆ. ಹೀಗಾಗಿ ಇದು ಬ್ರಿಟನ್, ಜರ್ಮನಿ, ಜಪಾನ್ ಸೇರಿ ಹಲವು ದೇಶಗಳ ಮತದಾರರ ಸಂಖ್ಯೆಗೆ ಸಮೀಪವಾಗಿದೆ. ಹೀಗಾಗಿ ಎಸ್ಐಆರ್ ಪ್ರಕ್ರಿಯೆಯೇ ದೋಷಪೂರಿತವಾಗಿದ್ದು, ಎಸ್ಐಆರ್ ಪ್ರಕ್ರಿಯೆಯನ್ನ ಮರುಪರಿಶೀಲಿಸುವಂತೆ ಆಗ್ರಹಿಸಿದರು. ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ಕಾವೇರಿ ಆಘಾತ; ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ
ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಒಬ್ಬರೇ ಚುನಾವಣಾ ಆಯೋಗದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಎಸ್ಐಆರ್ ವಿಚಾರದಲ್ಲಿ ಚುನಾವಣಾ ಆಯುಕ್ತರ ನಡುವೆ ಭಿನ್ನಾಭಿಪ್ರಾಯಗಳಿವೆ. ಇತರ ಚುನಾವಣಾ ಆಯುಕ್ತರು ಜ್ಞಾನೇಶ್ ಕುಮಾರ್ ಅವರ ಕೆಲವು ನಿರ್ಧಾರಗಳಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಜ್ಞಾನೇಶ್ ಕುಮಾರ್ ಯಾರ ಪರವಾಗಿ ಕೆಲಸ ಮಾಡುತ್ತಿದ್ದಾರೆ? ಬಿಜೆಪಿ ಮತ್ತು ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ, ಇದರ ಫಲಾನುಭವಿ ಜ್ಞಾನೇಶ್ ಕುಮಾರ್. ಬಿಜೆಪಿ ಚುನಾವಣಾ ಆಯೋಗದ ಮೂಲಕ ಭಾರತದ ಚುನಾವಣಾ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ನಿಯಂತ್ರಣ ಮಾಡುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಟ್ರಾಫಿಕ್, ಕಸ ಬೆಂಗಳೂರಿನ Top-2 ಸಮಸ್ಯೆಗಳು – ಕೃಷ್ಣ ಬೈರೇಗೌಡ
ಬಿಹಾರ ಮತ್ತು ಪಶ್ಚಿಮ ಬಂಗಾಳ ಚುನಾವಣೆಗಳ ಮುಂಚೆ ಲಕ್ಷ ಲಕ್ಷ ವೋಟರ್ಸ್ ಡಿಲೀಟ್ ಆಗಿದೆ. ಇದರಿಂದ ಬಿಜೆಪಿ ಗೆಲುವು ಸಾಧಿಸಿದೆ ಎಂಬುದನ್ನು ಉಲ್ಲೇಖಿಸಿ, ಆ ಚುನಾವಣೆಗಳನ್ನೂ ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ದೆಹಲಿ ಗ್ಯಾಂಗ್ರೇಪ್ ಕೇಸ್ | ಸರ್ಚ್ ಹಿಸ್ಟರಿ ಡಿಲೀಟ್, ಬಟ್ಟೆ ವಾಶ್ – ಸಾಕ್ಷ್ಯ ನಾಶಕ್ಕೆ ಆರೋಪಿಗಳಿಂದ ಮಾಸ್ಟರ್ ಪ್ಲ್ಯಾನ್!

