ದೊಡ್ಡಬಳ್ಳಾಪುರ: ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ಸಂಭವಿಸಿದೆ.
ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ರಾಮಪುರ ಗ್ರಾಮದ ಕುಮಾರ್ (44) ಮೃತ ರೈತ. ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ವೇಳೆ ಕಾಲು ಜಾರಿ ಬಿದ್ದು ಸಾವನಪ್ಪಿದ್ದಾರೆ ಎನ್ನಲಾಗಿದೆ. ಮಂಗಳವಾರ ಮಧ್ಯಾಹ್ನ 06 ದನಗಳ ಮೈತೊಳೆಯಲು ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದು, ದನಗಳು ಮನೆಗೆ ಹಿಂದಿರುಗಿ ಬಂದರೂ ಕುಮಾರ್ ಮನೆಗೆ ಬಾರದೇ ಇರುವುದರಿಂದ ಕುಟುಂಬಸ್ಥರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಿಯತಮೆಯ ಬೆತ್ತಲೆ ಫೋಟೋ ಸ್ನೇಹಿತರೊಂದಿಗೆ ಹಂಚಿಕೊಳ್ತಿದ್ದ ವಿಕೃತ ಕಾಮಿ ಅಂದರ್
Advertisement
Advertisement
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ.ಆರ್.ಹರೀಶ್ ನೇತೃತ್ವದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯವರು ಸ್ಥಳಕ್ಕೆ ತೆರಳಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತನಿಗೆ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ಮಡದಿ ಆರು ತಿಂಗಳ ಗರ್ಭಿಣಿ ಎನ್ನಲಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ನಾಲ್ವರು ಅಧಿಕಾರಿಗಳ ಅಮಾನತು
Advertisement
Web Stories