Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನಲ್ಲಿ ಇಬ್ಬರ ಜಗಳ ಮೂರನೇಯವನಿಗೆ ಲಾಭದಂತಾಗಿದೆ, ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆಯೂ ಪ್ರಯತ್ನಿಸ್ತಿದ್ದಾರೆ: ಆರ್‌.ಅಶೋಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‌ನಲ್ಲಿ ಇಬ್ಬರ ಜಗಳ ಮೂರನೇಯವನಿಗೆ ಲಾಭದಂತಾಗಿದೆ, ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆಯೂ ಪ್ರಯತ್ನಿಸ್ತಿದ್ದಾರೆ: ಆರ್‌.ಅಶೋಕ್‌

Bengaluru City

ಕಾಂಗ್ರೆಸ್‌ನಲ್ಲಿ ಇಬ್ಬರ ಜಗಳ ಮೂರನೇಯವನಿಗೆ ಲಾಭದಂತಾಗಿದೆ, ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆಯೂ ಪ್ರಯತ್ನಿಸ್ತಿದ್ದಾರೆ: ಆರ್‌.ಅಶೋಕ್‌

Public TV
Last updated: May 1, 2026 3:17 pm
Public TV
Share
2 Min Read
r ashok
SHARE

-ಬೆಂಗಳೂರಿನಲ್ಲಿ ಏಳು ಮಂದಿ ಸತ್ತಿದ್ದಕ್ಕೆ ಅಧಿಕಾರಿಗಳು ಕಾರಣರಲ್ಲ, ಮುಖ್ಯಮಂತ್ರಿಯೇ ಕಾರಣ

ಬೆಂಗಳೂರು: ಕಾಂಗ್ರೆಸ್‌ನಲ್ಲಿ (Congress) ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಲಹದಿಂದ ಹೆಚ್ಚು ಗೊಂದಲ ಉಂಟಾಗಿದೆ. ಇಬ್ಬರ ಜಗಳ ಮೂರನೆಯವನಿಗೆ ಲಾಭ ಎಂಬಂತೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೂಡ ಸಿಎಂ ಆಗಲು ಪ್ರಯತ್ನ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಕುರ್ಚಿ ಕಲಹದಿಂದಾಗಿ ಇಡೀ ಸರ್ಕಾರ ಗೊಂದಲದ ಗೂಡಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಹೇಳಿಕೆ ನೀಡಿ ಇನ್ನಷ್ಟು ಗೊಂದಲ ಉಂಟುಮಾಡಿದ್ದಾರೆ. ಮುಂದೆ ನನ್ನ ಪರ್ವ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಹೇಳುತ್ತಿದ್ದು, ಆ ಪರ್ವಕ್ಕೆ ಕಲ್ಲು ಬಿದ್ದಿದೆ. ಈಗ ಮಲ್ಲಿಕಾರ್ಜುನ ಖರ್ಗೆ ಮಧ್ಯ ಪ್ರವೇಶ ಮಾಡಿ ನನಗೂ ಆಸೆಯಿದೆ, ಹಿಂದೆ ನನಗೆ ಮೋಸವಾಗಿದೆ ಎಂದು ಹೇಳಿದ್ದಾರೆ. ಬಹುಶಃ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಅವರು ಸಿಎಂ ಆಗಲು ಗ್ರೀನ್‌ ಸಿಗ್ನಲ್‌ ಸಿಕ್ಕಿರಬಹುದು. ಖರ್ಗೆ ಸಿಎಂ ಆಗಬೇಕೆಂದು ಈಗಾಗಲೇ ಎಲ್ಲರೂ ಹೇಳಿದ್ದಾರೆ. ನಾನು ಸಿಎಂ ಆಗಲು ಸಿದ್ಧನಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ. ಇದುವರೆಗೆ ಅವರು ಬಹಳ ಪ್ರಯತ್ನ ಮಾಡಿದ್ದರೂ ಸಿಎಂ ಆಗಿರಲಿಲ್ಲ. ಈ ಸಮಯದಲ್ಲಾದರೂ ಸಿಎಂ ಆಗೋಣ ಎಂದು ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲೀಗ ಇಬ್ಬರ ಜಗಳ ಮೂರನೆಯವನಿಗೆ ಲಾಭ ಎನ್ನುವಂತಾಗಿದೆ ಎಂದರು. ಇದನ್ನೂ ಓದಿ: ಕಚೇರಿಯಲ್ಲೇ ಲೈಂಗಿಕ ಬೇಡಿಕೆ, Brown Boy Indian ಕರೆದು ನಿಂದನೆ – ಜೆಪಿ ಮೋರ್ಗಾನ್ ಅಧಿಕಾರಿ ವಿರುದ್ಧ ತಿರುಗಿಬಿದ್ದ ಭಾರತೀಯ

ಸಿನಿಮಾದ ಕ್ಲೈಮಾಕ್ಸ್‌ನಲ್ಲಿ ಆಗುವಂತೆಯೇ ಮಲ್ಲಿಕಾರ್ಜುನ ಖರ್ಗೆ ಬಂದಿದ್ದಾರೆ. ಮಾತುಕತೆಗೆ ಇನ್ನಷ್ಟು ಸಮಯಬೇಕೆಂದು ಅವರು ಹೇಳಿದ್ದಾರೆ. ಹಾಗೆಯೇ ಆದರೆ ಸಿಎಂ ಬದಲಾವಣೆ ಬಹಳ ತಡವಾಗುತ್ತದೆ. ಆ ವೇಳೆಗೆ ಚುನಾವಣೆ ಸಮೀಪ ಬಂದಿರುತ್ತದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಾದಂತೆ ಕಾಂಗ್ರೆಸ್‌ ಗೊಂದಲದ ಗೂಡಾಗಿ ಸರ್ವನಾಶವಾಗಲಿದೆ ಎಂದು ಹೇಳಿದರು.

ಇಡೀ ರಾಜ್ಯದಲ್ಲಿ ರಸ್ತೆಗಳು ಗುಂಡಿ ಬಿದ್ದಿವೆ. ಎಲ್ಲೂ ಅಭಿವೃದ್ಧಿ ನಡೆಯುತ್ತಿಲ್ಲ. ಇಂತಹ ಸಮಯದಲ್ಲಿ ದಾವಣಗೆರೆ ಚುನಾವಣೆ ಹಿನ್ನೆಲೆಯಲ್ಲಿ ಮುಸ್ಲಿಮ್ ಮುಖಂಡರ ವಿರುದ್ಧ ಕ್ರಮ ವಹಿಸಲಾಗಿದೆ. ಈಗ ಅದನ್ನು ಮರೆಮಾಚಲು ಮುಸ್ಲಿಮರಿಗೆ ಅನುದಾನ ನೀಡಲಾಗಿದೆ. ಆದರೆ ವಾಸ್ತವದಲ್ಲಿ ಮುಸ್ಲಿಮರ ಮನಸ್ಸು ಒಡೆದಿದೆ. ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಮುಸ್ಲಿಮರು ಕಾಂಗ್ರೆಸ್‌ಗೆ ಕೈ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ

ಮುಖ್ಯಮಂತ್ರಿಯೇ ನೇರ ಕಾರಣ:
ಬೆಂಗಳೂರಿನಲ್ಲಿ ಹದಿನೈದು ದಿನಕ್ಕೊಮ್ಮೆ ನಗರ ಪ್ರದಕ್ಷಿಣೆ ಮಾಡುತ್ತೇನೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ ಮೂರು ತಿಂಗಳಿಗೊಮ್ಮೆಯೂ ನಗರ ಪ್ರದಕ್ಷಿಣೆ ಮಾಡಲಿಲ್ಲ. ಮಳೆಹಾನಿಗೆ ಯಾವುದೇ ಸಿದ್ಧತೆ ಮಾಡಿಕೊಳ್ಳದೆ ಏಳು ಜೀವಗಳ ಬಲಿಯಾಗಿದೆ. ಈ ಸಾವಿಗೆ ನ್ಯಾಯ ಕೊಡಿ ಎಂದು ಜನರು ಕೇಳಿದರೆ, ತಮ್ಮ ತಪ್ಪನ್ನು ಮುಚ್ಚಿಟ್ಟು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಒಂದು ತಿಂಗಳ ಮುನ್ನ ಸಭೆ ನಡೆಸಿ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಬಗ್ಗೆ ವರದಿ ಪಡೆದು ದುರಸ್ತಿ ಮಾಡಿಸಬೇಕಿತ್ತು. ನೀರು ನಿಲ್ಲುವ ಕಡೆ ನೀರು ಹರಿದುಹೋಗಲು ವ್ಯವಸ್ಥೆ ಮಾಡಬೇಕಿತ್ತು. ಏನೂ ಮಾಡದೆಯೇ ಬೌರಿಂಗ್‌ ಆಸ್ಪತ್ರೆ ಮುಖ್ಯಸ್ಥರ ವಿರುದ್ಧ, ಎಂಜಿನಿಯರ್‌ಗಳ ವಿರುದ್ಧ ಕ್ರಮ ವಹಿಸಿದ್ದಾರೆ. ಆಸ್ಪತ್ರೆ ಮುಖ್ಯಸ್ಥರು ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕೆಂದು ನೋಡುತ್ತಾರೆಯೋ ಹೊರತು, ಕಾಂಪೌಂಡ್‌ ದುರಸ್ತಿ ಮಾಡುವುದು ಅವರ ಜವಾಬ್ದಾರಿಯಲ್ಲ. ಈ ಸಾವುಗಳಿಗೆ ಮುಖ್ಯಮಂತ್ರಿಯೇ ನೇರ ಕಾರಣ. ಇದರಲ್ಲಿ ಅಧಿಕಾರಿಗಳ ತಪ್ಪಿಲ್ಲ ಎಂದರು.ಇದನ್ನೂ ಓದಿ: ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ – ರಣರಂಗವಾದ ದೇವಸ್ಥಾನದ ಆವರಣ

TAGGED:bengalurucongressKarnataka CMmallikarjun kharger ashokಆರ್‌.ಅಶೋಕ್‌ಕಾಂಗ್ರೆಸ್ಬೆಂಗಳೂರುಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Sexual demands in the office abuse called Brown Boy Indian employee turns against JPMorgan Chases executive director Lorna Hajdini
Crime

ಕಚೇರಿಯಲ್ಲೇ ಲೈಂಗಿಕ ಬೇಡಿಕೆ, Brown Boy Indian ಕರೆದು ನಿಂದನೆ – ಜೆಪಿ ಮೋರ್ಗಾನ್ ಅಧಿಕಾರಿ ವಿರುದ್ಧ ತಿರುಗಿಬಿದ್ದ ಭಾರತೀಯ

Public TV
By Public TV
12 minutes ago
Elephant runs amok in Angamaly ernakulam tramples driver to death
Latest

ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ – ರಣರಂಗವಾದ ದೇವಸ್ಥಾನದ ಆವರಣ

Public TV
By Public TV
1 hour ago
hyderabad techie 300546490 16x9 0 1
Crime

ಪತ್ನಿಗೆ ಹಲವರ ಜೊತೆ ಅನೈತಿಕ ಸಂಬಂಧ, ವಿಡಿಯೋ ವೈರಲ್‌ – 19 ಪುಟ ಡೆತ್‌ನೋಟ್‌ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Public TV
By Public TV
2 hours ago
Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
3 hours ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
3 hours ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?