ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಮೈ ಹೀರೊ’ (My Hero) ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಒಂದು ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ಅಲ್ಲಿ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ (Jilali Rez Kallah), ಬಾಲನಟ ವೇದಿಕ್ ಕೌಶಿಕ್ (Vedik Kaushik), ದತ್ತಣ್ಣ (Duttanna), ಅಂಕಿತ ಅಮರ್ ಹಾಗೂ ಅಲ್ಲಿನ ಸ್ಥಳೀಯ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
Advertisement
ಮುಂದಿನ ದಿನಗಳಲ್ಲಿ ಕೊನೆಯ ಹಂತದ ಚಿತ್ರೀಕರಣ ನಡೆಯಲಿದ್ದು, ಚಿತ್ರತಂಡ ಯು.ಎಸ್.ಎ ಗೆ ಹಾರಲಿದೆ. ಇಡೀ ವಿಶ್ವದಲ್ಲೇ ಇರುವ ಸಾಮಾಜಿಕ ಸಮಸ್ಯೆಯೊಂದರ ಕುರಿತಾದ ಚಿತ್ರವಿದು. ಅವಿನಾಶ್ ವಿಜಯಕುಮಾರ್ (Avinash Vijayakumar) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ. ಇದನ್ನೂ ಓದಿ:ಜುಲೈನಲ್ಲಿ ಹೆರಿಗೆ : ಗುಟ್ಟು ಬಿಟ್ಟುಕೊಟ್ಟ ರಾಮ್ ಚರಣ್ ಪತ್ನಿ ಉಪಾಸನಾ
Advertisement
Advertisement
ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ ಮೈ ಹೀರೊ ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಸಂಭಾಷಣೆ ಬರೆದಿದ್ದಾರೆ.