ಬಳ್ಳಾರಿ: ಜೀವದ ಹಂಗು ತೊರೆದು ಜನರ ರಕ್ಷಣೆ ಮಾಡಲು ಹೊರಟಿದ್ದ, ಅಗ್ನಿಶಾಮಕ ದಳದ ಸಿಬ್ಬಂದಿಯ ಬೋಟ್ (Boat) ಮುಳುಗಿ ಪ್ರಾಣಾಪಾಯದಿಂದ ಪಾರಾದ ಘಟನೆ ಬಳ್ಳಾರಿ (Bellary) ಜಿಲ್ಲೆಯ ಸಿರಗುಪ್ಪಾ ತಾಲೂಕಿನ ಬಲಕುಂದಿ ಗ್ರಾಮದಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪಾ ತಾಲೂಕಿನ ಬಲಕುಂದಿ ಗ್ರಾಮದ ಬಳಿ ಇರುವ ಶನೇಶ್ವರ ದೇವಾಲಯದಲ್ಲಿ ಮಳೆಯಿಂದಾಗಿ (Rain) ನೀರಿನಲ್ಲಿ ಸಿಲುಕಿದ್ದ ನಾಲ್ಕು ಜನರನ್ನು ರಕ್ಷಣೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರೆಳಿದ್ದರು. ಈ ವೇಳೆ ಅವರ ಬೋಟ್ ಮಗುಜಿ ಬಿದ್ದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದರು. ಕೊನೆಗೆ ಇನ್ನೊಂದು ಬೋಟ್ ಮೂಲಕ ಇತರ ಸಿಬ್ಬಂದಿ ತೆರಳಿ ರಕ್ಷಣೆ ಮಾಡಿದ್ದಾರೆ. ಪ್ರಾಣದ ಹಂಗು ತೊರೆದು ತಮ್ಮ ಪ್ರಾಣ ರಕ್ಷಣೆ ಮಾಡುವುದರ ಜೊತೆಗೆ ಉಳಿದ ನಾಲ್ಕು ಜನರನ್ನು ರಕ್ಷಣೆ ಮಾಡಿದ್ದಾರೆ.
ಇಂದು ಬೆಳಗ್ಗೆ ಶನೇಶ್ವರ ದೇವಸ್ಥಾನದಲ್ಲಿ ಸಿಲುಕಿಕೊಂಡಿದ್ದ ನಾಲ್ಕು ಜನರ ರಕ್ಷಣೆಗಾಗಿ ಅಗ್ನಿಶಾಮಕದಳದ ಸಿಬ್ಬಂದಿ ತೆರಳಿದ್ದರು. ಈ ವೇಳೆ ಅಗ್ನಿಶಾಮಕದಳದ ಸಿಬ್ಬಂದಿ ಇದ್ದ ಬೋಟ್ ಮಗುಜಿ ಬಿದ್ದಿದೆ. ಬಳಿಕ ಅಗ್ನಿಶಾಮಕದಳದ ಸಿಬ್ಬಂದಿ ಈಜಿಕೊಂಡು ಶನೇಶ್ವರ ದೇವಸ್ಥಾನಕ್ಕೆ ತೆರಳಿದ್ದಾರೆ. ಆ ಬಳಿಕ ಇನ್ನೊಂದು ಬೋಟ್ ತರಿಸಿ ಅಲ್ಲಿದ್ದವರನ್ನು ರಕ್ಷಣೆ ಮಾಡಲಾಯಿತು.