ಬೆಂಗಳೂರು: ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ. ನೋಂದಣಿ ಮಾಡಿಕೊಂಡಿರುವ ಒಟ್ಟು 2,16,559 ವಿದ್ಯಾರ್ಥಿಗಳಿಗೆ ಹೋಲಿಸಿದರೆ ಕ್ರಮವಾಗಿ ಶೇ.80.95 ಹಾಗೂ ಶೇ.96.06 ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ರೈಲು ಸಂಚಾರಕ್ಕೆ ಜೂನ್ 20ರಂದು ಹಸಿರು ನಿಶಾನೆ
Advertisement
Advertisement
ಈ ಬಾರಿ ಪರೀಕ್ಷೆಯಲ್ಲಿ ನೀಟ್ ಮಾದರಿಯಲ್ಲಿ ನಿಯಮ ಜಾರಿ ಮಾಡಲಾಗಿತ್ತು. ರಾಜ್ಯದ ಎಲ್ಲಾ ಕೇಂದ್ರಗಳಲ್ಲೂ ಸುಸೂತ್ರವಾಗಿ ಪರೀಕ್ಷೆ ನಡೆದಿದೆ. ಹಿಜಬ್ ಸೇರಿದಂತೆ ಯಾವುದೇ ವಿಷಯಗಳಿಗೆ ವಿವಾದಗಳು ಆಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮೆಟ್ರೋ ಸಂಚಾರ ರಾತ್ರಿ 1.30ರ ವರೆಗೂ ವಿಸ್ತರಣೆ – ಯಾಕೆ ಗೊತ್ತೇ?
Advertisement
ಎರಡನೇ ದಿನವಾದ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಶನಿವಾರದಂದು ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಆಯ್ದ 6 ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.