ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ (Ayodhya) ಶ್ರೀರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಮಂದಿರ ನಿರ್ಮಾಣ ಕೆಲಸ ಭರದಿಂದ ಸಾಗಿದೆ. ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಮೊದಲ ಚಿನ್ನ ಲೇಪಿತ ಬಾಗಿಲನ್ನು ಅಳವಡಿಸಲಾಗಿದ್ದು, ಮುಂದಿನ ಮೂರು ದಿನಗಳಲ್ಲಿ ಇನ್ನೂ 13 ಬಾಗಿಲುಗಳನ್ನು ಅಳವಡಿಸಲಾಗುವುದು.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ದೇವಾಲಯದ ಚಿನ್ನದ ಲೇಪಿತ ಬಾಗಿಲುಗಳ ಮೊದಲ ಚಿತ್ರ ಮಂಗಳವಾರ ಹೊರಬಿದ್ದಿದೆ. ದೇವಾಲಯದ ಗರ್ಭಗುಡಿ ಅಥವಾ ‘ಗರ್ಬಗೃಹ’ದಲ್ಲಿ ಚಿನ್ನದ ಲೇಪಿತ ಬಾಗಿಲುಗಳನ್ನು (Swarn Dwaar) ಸ್ಥಾಪಿಸಲಾಗಿದೆ. ಅಲ್ಲಿ ದೇವರ ವಿಗ್ರಹವನ್ನು ಜನವರಿ 22 ರಂದು ಪ್ರತಿಷ್ಠಾಪಿಸಲಾಗುವುದು. ಹೈದರಾಬಾದ್ ಮೂಲದ ಕುಶಲಕರ್ಮಿಯೊಬ್ಬರು ಬಾಗಿಲನ್ನು ರೂಪಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕಾಗಿ 30 ವರ್ಷಗಳಿಂದ ‘ಮೌನ ವ್ರತ’ – ಒಂದು ಮಾತೂ ಆಡದೇ ಇದ್ದ ಮಹಿಳೆ ಮುಖದಲ್ಲಿ ಮಂದಹಾಸ
Advertisement
The first gold door has been installed in Shri Ram Temple in Ayodhya, 13 more such doors to be installed in the next three days. #RamMandir #Ayodhya #AyodhyaDham #MandirSafaiKaSankalp pic.twitter.com/pruKUi9OD7
— DD News (@DDNewslive) January 9, 2024
Advertisement
ಲಕ್ಷಾಂತರ ಜನರ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕೇಂದ್ರ ಬಿಂದುವಾದ ‘ಪ್ರಾಣ ಪ್ರತಿಷ್ಠಾ’ ಸಮಾರಂಭವು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Advertisement
View this post on Instagram
Advertisement
ಶ್ರೀರಾಮ ಜನ್ಮಭೂಮಿ ಟ್ರಸ್ಟ್, ದೇವಾಲಯದ ಗರ್ಭಗುಡಿ ಪೂರ್ಣಗೊಂಡಿದೆ. 500 ವರ್ಷಗಳ ತಪಸ್ಸಿನ ಪರಾಕಾಷ್ಠೆ ಇದು. ಪ್ರಪಂಚದಾದ್ಯಂತ ಲಕ್ಷಾಂತರ ರಾಮಭಕ್ತರ ಆರಾಧನೆ ಸ್ವೀಕರಿಸಲು ಪ್ರಭು ಶ್ರೀರಾಮಲಲ್ಲಾ ವಿಗ್ರಹ ತನ್ನೆಲ್ಲಾ ವೈಭವದೊಂದಿಗೆ ಸಿದ್ಧವಾಗಿದೆ ಎಂದು ತಿಳಿಸಿತ್ತು. ಇದನ್ನೂ ಓದಿ: Ayodhya Ram Mandir: ಶೀಘ್ರದಲ್ಲೇ ಸಂಚರಿಸಲಿವೆ ನೋಯ್ಡಾದಿಂದ ಅಯೋಧ್ಯೆಗೆ ಡೈರೆಕ್ಟ್ ಬಸ್
ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾದ ರಾಮಮಂದಿರ ಸಂಕೀರ್ಣವು 380 ಅಡಿ ಉದ್ದ (ಪೂರ್ವ-ಪಶ್ಚಿಮ ದಿಕ್ಕು), 250 ಅಡಿ ಅಗಲ ಮತ್ತು 161 ಅಡಿ ಎತ್ತರ ಇರಲಿದೆ. ದೇವಾಲಯದ ಪ್ರತಿಯೊಂದು ಮಹಡಿಯು 20 ಅಡಿ ಎತ್ತರವಿದ್ದು, ಒಟ್ಟು 392 ಕಂಬಗಳು ಮತ್ತು 44 ದ್ವಾರಗಳನ್ನು ಹೊಂದಿದೆ.
ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಸುಮಾರು 7,000 ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ದೇವಾಲಯದ ಟ್ರಸ್ಟ್‌ನ ವಿವಿಧ ಪ್ರತಿನಿಧಿಗಳು, ಆರ್‌ಎಸ್‌ಎಸ್-ವಿಹೆಚ್‌ಪಿ ಸದಸ್ಯರು ಮತ್ತು ಅವರ ಮಿತ್ರಪಕ್ಷಗಳು ಅತಿಥಿಗಳನ್ನು ಖುದ್ದಾಗಿ ಭೇಟಿ ಮಾಡಿ ಆಮಂತ್ರಣ ಪತ್ರಿಕೆಗಳನ್ನು ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ಈ ಸ್ಥಳದಲ್ಲಿದೆ ಶಬರಿ ಗುಹೆ, ರಾವಣನ ಸಂಹಾರಕ್ಕೆ ಸೈನ್ಯ ಸಜ್ಜಾಗಿದ್ದೂ ಇಲ್ಲಿಯೇ!