ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ನಟನೆಯ ‘ಭೈರತಿ ರಣಗಲ್’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಇಂಟರೆಸ್ಟಿಂಗ್ ಮಾಹಿತಿ ಸಿಕ್ಕಿದೆ. ಇದೇ ಆಗಸ್ಟ್ 10ರಂದು ಶಿವಣ್ಣ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲು ಮುಹೂರ್ತ ಫಿಕ್ಸ್ ಆಗಿದೆ. ಇದನ್ನೂ ಓದಿ:Bigg Boss Kannada 11: ದೊಡ್ಮನೆ ಆಫರ್ ಬಗ್ಗೆ ಜ್ಯೋತಿ ರೈ ಪ್ರತಿಕ್ರಿಯೆ
‘ಮಫ್ತಿ’ ಸಿನಿಮಾದ ಸೀಕ್ವೆಲ್ ಆಗಿರುವ ‘ಭೈರತಿ ರಣಗಲ್’ (Bhairathi Rangal) ಸಿನಿಮಾದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ಲಾಯರ್ ಆಗಿ ಶಿವಣ್ಣ ಖದರ್ ತೋರಿಸಲು ರೆಡಿಯಾಗಿದ್ದಾರೆ. ಇದೀಗ ‘ಬಡವರ ಬದುಕನು ಕಾಯಲು ನಿಂತ ಸಿಂಹ ಕೇಸರಿ ಬಾ’ ಎಂಬ ಟೈಟಲ್ ಸಾಂಗ್ ಆ.10ರಂದು ಸಂಜೆ 5 ಗಂಟೆಗೆ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇತ್ತೀಚೆಗೆ ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಸಿನಿಮಾದ ಟೀಸರ್ ರಿಲೀಸ್ ಆಗಿತ್ತು. ಶಿವಣ್ಣ ಮಾಸ್ ಆಗಿ ಕಾಣಿಸಿಕೊಂಡಿದ್ದರು. ನಾನು ತಾಳ್ಮೆ ಕಳೆದುಕೊಂಡಾಗಲೆಲ್ಲಾ ತುಂಬಾ ಜನ ತಲೆಗಳನ್ನು ಕಳೆದುಕೊಂಡಿದ್ದಾರೆ ಎಂದು ಖಡಕ್ ಆಗಿ ಶಿವಣ್ಣ ಡೈಲಾಗ್ ಹೇಳಿದ್ದರು. ಈಗ ಚಿತ್ರದ ಮೊದಲ ಹಾಡನ್ನು ರಿಲೀಸ್ ಮಾಡಲು ತೆರೆಮರೆಯಲ್ಲಿ ಕೆಲಸ ನಡೆಯುತ್ತಿದೆ.
ಇನ್ನೂ ಶಿವರಾಜ್‌ಕುಮಾರ್‌ಗೆ ಜೋಡಿಯಾಗಿ ರುಕ್ಮಿಣಿ ವಸಂತ್ (Rukmini Vasanth) ನಟಿಸಿದ್ದಾರೆ. ಇವರ ಜೊತೆ ಬಹುಭಾಷಾ ನಟಿ ಛಾಯಾ ಸಿಂಗ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಸೆಪ್ಟೆಂಬರ್‌ನಲ್ಲಿ ಸಿನಿಮಾ ರಿಲೀಸ್ ಮಾಡಲು ತಯಾರಿ ನಡೆಯುತ್ತಿದೆ. ‘ವೇದ’ ಸಕ್ಸಸ್ ನಂತರ ಈ ಚಿತ್ರವನ್ನು ಗೀತಾ ಶಿವರಾಜ್‌ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.