ಧಾರವಾಡ: ನಗರದಲ್ಲಿ ಕಳೆದ ಮೂರು ದಿನಗಳಿಂದ ಸಾಹಿತ್ಯ ಹಾಗೂ ಕನ್ನಡದ ಕಂಪು ಬೀರಿದ್ದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಮುಕ್ತಾಯವಾಯಿತು. ಈ ಸಮ್ಮೇಳದಲ್ಲಿ ಐದು ನಿರ್ಣಯಗಳನ್ನು ಮಂಡನೆ ಮಾಡಲಾಯಿತು.
ಸಮ್ಮೇಳನದ ಅಧ್ಯಕ್ಷ ಡಾ.ಚಂದ್ರಶೇಖರ್ ಕಂಬಾರರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರ ನೇತೃತ್ವದಲ್ಲಿ ಇಂದು ಸಂಜೆ ಬಹಿರಂಗ ಸಭೆಯಲ್ಲಿ ನಿರ್ಣಯಗಳನ್ನು ಮಂಡನೆ ಮಾಡಲಾಯ್ತು. ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಅವರು ಐದು ನಿರ್ಣಯಗಳನ್ನು ಮಂಡಿಸಿದರು. ಇದಕ್ಕೆ ಸಭಿಕರು ಜೈಕಾರ ಕೂಗುವ ಮೂಲಕ ಬೆಂಬಲ ಸೂಚಿಸಿದರು.
Advertisement
Advertisement
ಸಮ್ಮೇಳನದ ನಿರ್ಣಯಗಳು?:
1) ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿದಕ್ಕೆ ಎಲ್ಲ ಸಾಹಿತ್ಯ ಆಸಕ್ತರು, ಪದಾಧಿಕಾರಿಗಳಿಗೆ ಧನ್ಯವಾದಗಳು.
2) ರಾಷ್ಟ್ರಕವಿ ಕುವೆಂಪು ರಚಿತ ನಾಡ ಗೀತೆಯನ್ನು ಹಾಡುವ ಅವಧಿಯನ್ನು ಗರಿಷ್ಠ 2.30 ನಿಮಿಷಗಳಿಗೆ ನಿಗದಿಗೊಳಿಸಬೇಕು.
3) ಬರುವ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರ 1 ಸಾವಿರ ಆಂಗ್ಲ ಶಾಲೆ ತೆರೆಯುವ ನಿರ್ಧಾರವನ್ನು ಕೈ ಬಿಡಬೇಕು.
4) ಕೇಂದ್ರ ಸರ್ಕಾರದ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕೊಡಬೇಕು.
5) ಎಲ್.ಕೆ.ಜಿ, ಯು.ಕೆ.ಜಿ ಸೇರಿದಂತೆ 1ರಿಂದ 7ನೇ ತರಗತಿ ವರೆಗೆ ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣ ಗೊಳಿಸುವುದು.
Advertisement
ಈ ಹಿಂದಿನ ಸಮ್ಮೇಳನದಲ್ಲಿ ತೆಗೆದು ಕೊಂಡ ನಿರ್ಣಯಗಳು ಕಾರ್ಯರೂಪಕ್ಕೆ ಬಂದಿರಲಿಲ್ಲ. ಹೀಗಾಗಿ ಈ ಬಾರಿ ಕೇವಲ ಐದು ನಿರ್ಣಯಗಳನ್ನು ಮಾತ್ರ ಕೈಗೊಳ್ಳಲಾಗಿದೆ. ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯಲಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv