ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಫುಲ್ ಗಿಜಿ ಗಿಜಿ ಅಂತಿದ್ದ ಬಿಎಸ್ ಯಡಿಯೂರಪ್ಪ ನಿವಾಸ ಈಗ ಬಿಕೋ ಅಂತಿದೆ.
ಫಲಿತಾಂಶದ ಬಳಿಕ ಧವಳಗಿರಿ ನಿವಾಸದಲ್ಲಿ ಸಭೆಗಳ ಮೇಲೆ ಸಭೆಗಳು ನಡೆದಿತ್ತು. ರಾಜಕೀಯ ನಾಯಕರು, ಬೆಂಬಲಿಗರಿಂದ ಬಿಎಸ್‍ವೈ ನಿವಾಸ ತುಂಬಿ ಹೋಗಿತ್ತು. ಆದ್ರೆ ಶನಿವಾರ ಸಂಜೆ ಬಿಎಸ್‍ವೈ ರಾಜೀನಾಮೆ ನೀಡಿದ ಬಳಿಕ ಮನೆ ಖಾಲಿಯಾಗಿದೆ.
Advertisement
ಇತ್ತ ನಾನೇ ಮುಖ್ಯಮಂತ್ರಿ ಅಂತ ಸಿಎಂ ಪಟ್ಟ ಅಲಂಕರಿಸಿದ್ದ ಕೇವಲ 55 ಗಂಟೆಗಳಲ್ಲೇ ಯಡಿಯೂರಪ್ಪ ಅವರು ತಮ್ಮ ಸ್ಥಾನವನ್ನು ಕಳೆದುಕೊಂಡು ಇದೀಗ ಮೌನಕ್ಕೆ ಶರಣಾಗಿದ್ದಾರೆ.
Advertisement
Advertisement
ಚುನಾವಣಾ ಫಲಿತಾಂಶಕ್ಕೂ ಮೊದಲೇ ಫುಲ್ ಜೋಶ್ ನಿಂದ ನಾನೇ ಮುಂದಿನ ಸಿಎಂ ಅಂತ ಹೇಳಿದ್ದರು. ಫಲಿತಾಂಶದಲ್ಲೂ ಬಿಜೆಪಿ ಬಹುಮತ ಪಡೆದಿತ್ತು. ಆದ್ರೆ ಈ ಮಧ್ಯೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು. ಹೀಗಾಗಿ ತರಾತುರಿಯಾಗಿ ರಾಜ್ಯಪಾಲರ ಅನುಮತಿಯಂತೆ ಬಿಎಸ್ ಯಡಿಯೂರಪ್ಪ ಅವರು ಪ್ರಮಾಣ ವಚನ ಮಾಡಿಯೇ ಬಿಟ್ಟರು.
Advertisement
ಬಿಎಸ್‍ವೈ ಪ್ರಮಾಣವಚನವನ್ನು ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬಿಜೆಪಿ ಶನಿವಾರ ಸಂಜೆಯೊಳಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡುವಂತೆ ಸೂಚನೆ ನೀಡಿತ್ತು. ಈ ನಡುವೆ ರಾಜ್ಯ ರಾಜಕಾರಣದಲ್ಲಿ ಹಲವು ಹೈಡ್ರಾಮಾಗಳೇ ನಡೆದು ಹೋದವು. ಕೊನೆಗೆ ಬಿಎಸ್ ವೈ ಅವರು ವಿಶ್ವಾಸ ಮತ ಸಾಬೀತು ಮಾಡಲು ಸಾಧ್ಯವಾಗದೇ ಭಾವನಾತ್ಮಕ ಭಾಷಣ ಮಾಡಿ ವಿಧಾನಸಭೆಯಿಂದ ನೇರವಾಗಿ ರಾಜ್ಯಪಾಲರ ಬಳಿ ತೆರಳಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
Bengaluru: BJP's BS Yeddyurappa submits resignation as Chief Minister of Karnataka to Governor Vajubhai Vala. pic.twitter.com/88dbTelz3l
— ANI (@ANI) May 19, 2018
ಒಟ್ಟಿನಲ್ಲಿ ಕರ್ನಾಟಕದಲ್ಲಿ ಇದೀಗ ನಡೆಯುತ್ತಿರುವ ಬೆಳವಣಿಗೆಗಳು ರಾಷ್ಟ್ರ ರಾಜಕಾರಣದಲ್ಲಿ ಹೊಸ ಮನ್ವಂತರಕ್ಕೆ ಮುನ್ನುಡಿಯಾಗುವ ಸಾಧ್ಯತೆಗಳು ಹೆಚ್ಚಾಗಿ ಕಾಣಿಸುತ್ತಿದೆ. ಮುಂದಿನ ಲೋಕಸಭೆಗೆ ಚುನಾವಣೆ ವೇಳೆಗೆ ಬಿಜೆಪಿಯೇತರ ಪಕ್ಷಗಳು ಒಟ್ಟಾಗುವ ಸಂಭವ ಹೆಚ್ಚಿದೆ. ಇದಕ್ಕೆ ಪೂರಕವಾಗಿ ಕಂಠೀರವ ಸ್ಟೇಡಿಯಂನಲ್ಲಿ ಹೆಚ್‍ಡಿಕೆ ಪ್ರಮಾಣವಚನ ಸಮಾರಂಭಕ್ಕೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಮಾಯಾವತಿ, ಶರದ್ ಪವಾರ್, ಚಂದ್ರಬಾಬು ನಾಯ್ಡು, ಕೆ ಚಂದ್ರಶೇಖರ್ ರಾವ್ ಸೇರಿದಂತೆ ಹಲವು ಪಕ್ಷಗಳ ಪ್ರಮುಖರು ಹಾಜರಾಗುವ ಸಾಧ್ಯತೆ ಇದೆ.
ಬಿಜೆಪಿ ಸೋಲಿಸಲು ಇತರೆ ಪಕ್ಷಗಳ ಜೊತೆ ಕೈಜೋಡಿಸಲು ಕಾಂಗ್ರೆಸ್ ಸಿದ್ಧ ಎಂದು ರಾಹುಲ್ ಗಾಂದಿ ಕೂಡ ಘೋಷಿಸಿದ್ರು. ಇನ್ನು ರಾಜ್ಯದಲ್ಲಿ ನಡೆಯಬೇಕಿರೋ ಮೂರು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮುಂದುವರೆಸಲಿದೆ ಎನ್ನುವ ಮಾತುಗಳು ಕೇಳಿ ಬಂದಿದೆ.
Bengaluru: Congress' DK Shivkumar, JD(S)'s HD Kumaraswamy & other MLAs at Vidhana Soudha after resignation of BJP's BS Yeddyurappa as Chief Minister of Karnataka. pic.twitter.com/wZ6FH05jrQ
— ANI (@ANI) May 19, 2018