ನವದೆಹಲಿ: ಚುನಾವಣೆ ಹೊತ್ತಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಲಾಗಿದೆ. ಬಂಧನದ ಈ ಸಮಯ ನ್ಯಾಯ ಸಮ್ಮತ ಚುನಾವಣೆಯನ್ನು ಸೃಷ್ಟಿಸುವುದಿಲ್ಲ. ಈ ಬಂಧನದ ಅಡಿಪಾಯವೇ ದೋಷ ಪೂರಿತ ಎಂದು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ (Abhishek Singhvi) ವಾದಿಸಿದ್ದಾರೆ.
ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ ಸಿಂಘ್ವಿ, ನನ್ನ ಕಕ್ಷಿದಾರರ ಬಂಧನದ ಬುನಾದಿ ದೋಷಪೂರಿತವಾಗಿರುವ ಕಾರಣ ಅವರನ್ನು ಬಿಡುಗಡೆ ಮಾಡಬೇಕು. ಇದು ನನ್ನ ಪ್ರಾರ್ಥನೆ. ಇದು ಕ್ರಿಮಿನಲ್ ವಿಷಯವಾಗಿದ್ದರೂ ಕಾನೂನು ಮತ್ತು ಮೂಲಭೂತ ರಚನೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ವಾದಿಸಿದರು. ಇದನ್ನೂ ಓದಿ: ಮುನಿಯಪ್ಪ ಅಳಿಯನಿಗೆ ಕೋಲಾರ ಟಿಕೆಟ್ ಕೊಟ್ಟರೆ ರಾಜೀನಾಮೆ – ‘ಕೈ’ ಎಂಎಲ್‌ಸಿ, ಶಾಸಕರಿಂದ ಬೆದರಿಕೆ
Advertisement
Advertisement
ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಒಬ್ಬ ಹಾಲಿ ಮುಖ್ಯಮಂತ್ರಿಯನ್ನು ಬಂಧಿಸಲಾಗಿದೆ. ವಿಚಾರಣೆಯಲ್ಲಿ ಯಾವುದೇ ವಸ್ತು ವಿಷಯವಿಲ್ಲ. ಬಂಧನದ ಉದ್ದೇಶವು ನಾನ್-ಲೆವೆಲ್ ಪ್ಲೇಯಿಂಗ್ ಫೀಲ್ಡ್ ಅನ್ನು ರಚಿಸುವುದಾಗಿದೆ. ಈ ಮೂಲಕ ಸಂವಿಧಾನದ ಮೂಲಭೂತ ರಚನೆಯನ್ನು ಹೊಡೆಯುತ್ತಿದ್ದಾರೆ. ಸೆಕ್ಷನ್ 19ರ ಅಡಿಯಲ್ಲಿ ಬಂಧನದ ಮಿತಿಯನ್ನು ಇರಿಸಲಾಗಿದೆ. ಇದಕ್ಕೆ ಕಾರಣ ಸೆಕ್ಷನ್ 45ರ ಅಡಿಯಲ್ಲಿ ಜಾಮೀನು ಪಡೆಯುವುದು ತುಂಬಾ ಕಷ್ಟಕರವಾಗಿದೆ ಎಂದು ಸಿಂಘ್ವಿ ಹೇಳಿದರು. ಇದನ್ನೂ ಓದಿ: ಕೋರ್ಟ್ ಆವರಣದಲ್ಲಿ ಪ್ರತಿಭಟನೆ ಗಂಡಾಂತರ ಆಹ್ವಾನಿಸಿದಂತೆ: ಆಪ್‌ಗೆ ದೆಹಲಿ ಹೈಕೋರ್ಟ್ ಎಚ್ಚರಿಕೆ
Advertisement
ಕೇಜ್ರಿವಾಲ್ ಪರ ವಾದ ಮಂಡಿಸಿದ ಮತ್ತೊರ್ವ ಹಿರಿಯ ವಕೀಲ ಅಮಿತ್ ದೇಸಾಯಿ, ಪ್ರಕರಣದಲ್ಲಿ ಸೆಕ್ಷನ್ 19 ಅನ್ನು ಸರಿಯಾಗಿ ಪಾಲಿಸಿಲ್ಲ. ಇದು ಪ್ರಾಥಮಿಕ ಅಂಶವಾಗಿದೆ. ಬಂಧನದ ಸಮಯದಲ್ಲಿ ಅರ್ಜಿದಾರರು ಸೆಕ್ಷನ್ 3ರ ಅಡಿಯಲ್ಲಿ ಸೂಚಿಸಲಾದ ಚಟುವಟಿಕೆಗಳನ್ನು ಮಾಡುವಲ್ಲಿ ತಪ್ಪಿತಸ್ಥರು ಎಂದು ಸ್ಥಾಪಿಸಲು ಡಿಒಇ (Department Of Expenditure) ವಿಫಲವಾಗಿದೆ. ಯಾವುದೇ ವಿಚಾರಣೆಯಿಲ್ಲದೆ ಅರ್ಜಿದಾರರನ್ನು ಬಂಧಿಸಲಾಗಿದೆ. ಇದು ರಾಜಕೀಯ ಸೇಡನ್ನು ಪ್ರತಿಬಿಂಬಿಸುತ್ತದೆ ಎಂದು ವಾದಿಸಿದರು. ಇದನ್ನೂ ಓದಿ: ಜೆಪಿ ನಡ್ಡಾ ಭೇಟಿ ಮಾಡಿ ಚರ್ಚಿಸಿದ ನಟಿ ಕಂಗನಾ
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಸಲ್ಲಿಸಲು ಕಾಲಾವಕಾಶ ನೀಡುವಂತೆ ಇ.ಡಿ ಹೈಕೋರ್ಟ್‌ಗೆ ಮನವಿ ಮಾಡಿತು. ಏಜೆನ್ಸಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ಅರ್ಜಿ ಮಂಗಳವಾರವಷ್ಟೇ ಲಭ್ಯವಾಗಿದೆ. ಇ.ಡಿ ನಿಲುವನ್ನು ದಾಖಲಿಸಲು ಮೂರು ವಾರಗಳ ಕಾಲಾವಕಾಶ ನೀಡಬೇಕು ಎಂದು ಹೇಳಿದರು. ಮಧ್ಯಂತರ ಪರಿಹಾರಕ್ಕೂ ಸ್ಪಂದಿಸಲು ಸೂಕ್ತ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ? – ಕೇಜ್ರಿವಾಲ್ ಬಹಿರಂಗಪಡಿಸ್ತಾರೆ – ಸುನೀತಾ ಕೇಜ್ರಿವಾಲ್