ChitradurgaDistrictsKarnatakaLatestLeading NewsMain Post

ಸಂತ್ರಸ್ತೆಯರ ಹೇಳಿಕೆ ಮೇಲೆ ನಿಂತಿದೆ ಮುರುಘಾ ಶ್ರೀಗಳ ಭವಿಷ್ಯ..?

ಚಿತ್ರದುರ್ಗ: ಮುರುಘಾ ಶರಣರ ಮೇಲೆ ಪೋಕ್ಸೊ ಕೇಸ್ ದಾಖಲಾದ ಹಿನ್ನೆಲೆ ಕೋಟೆನಾಡು ಚಿತ್ರದುರ್ಗ ಸದ್ಯ ಭಾರೀ ಸುದ್ದಿಯಲ್ಲಿದೆ. ಪ್ರಕರಣದ ಸಂತ್ರಸ್ತೆಯರ ಹೇಳಿಕೆಯ ಆಧಾರದ ಮೇಲೆ ಶ್ರೀಗಳ ಮುಂದಿನ ಭವಿಷ್ಯ ನಿರ್ಧಾರವಾಗಲಿದೆ.

ಕೋಟೆನಾಡು ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದೆ. ಮೈಸೂರಿನಲ್ಲಿ ಹೇಳಿದ್ದ ಹೇಳಿಕೆಯನ್ನೇ ಚಿತ್ರದುರ್ಗದಲ್ಲೂ ನ್ಯಾಯಾಧೀಶರ ಮುಂದೆ ಸಂತ್ರಸ್ತರೆಯರು ಹೇಳಿದ್ರೆ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಕಂಟಕ ಫಿಕ್ಸ್ ಆಗುವ ಸಾಧ್ಯತೆ ಇದೆ. ದಲಿತ ಮುಖಂಡರು ಸಹ ಶರಣರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಹ ಆಗ್ರಹಿಸಿದ್ದಾರೆ.

ಈ ವಿಚಾರ ತಿಳಿದ ಭಕ್ತರು ಹಾಗೂ ವಿವಿಧ ಮಠಗಳ ಮಠಾಧೀಶರು ಮುರುಘಾ ಮಠಕ್ಕೆ ಆಗಮಿಸ್ತಿದ್ದಾರೆ. ಅಲ್ಲದೇ ಶರಣರಿಗೆ ಸಾಂತ್ವನ ಹೇಳುವುದರ ಜೊತೆಗೆ ಕಂಟಕದಿಂದ ಪಾರಾಗಲು ಪ್ಲಾನ್ ಮಾಡ್ತಿದ್ದಾರೆ. ಮಾತುಕತೆ ಹಾಗೂ ರಾಜಿ ಸಂಧಾನದೊಂದಿಗೆ ಪ್ರಕರಣದಿಂದ ಪಾರಾಗಲು ಯತ್ನಿಸುತ್ತಿದ್ದಾರೆ. ಸಂತ್ರಸ್ತೆಯರ ಹೇಳಿಕೆ ಮೇಲೆ ಶ್ರೀಗಳ ಭವಿಷ್ಯ ನಿಂತಿದ್ದು, ಶ್ರೀಗಳು ಹಾಗೂ ಇತರೆ ಆರೋಪಿಗಳಿಗೆ ಪೊಲೀಸರಿಂದ ನೋಟಿಸ್ ಜಾರಿ ಸಾಧ್ಯತೆ ಇದೆ.

ಮುರುಘಾ ಶ್ರೀಗಳ ವಿರುದ್ಧದ ಫೋಕ್ಸೊ ಕೇಸ್ ವಿಚಾರದಲ್ಲಿ ಎಲ್ಲರ ಚಿತ್ತ ಸಂತ್ರಸ್ತೆಯರ ಹೇಳಿಕೆಯತ್ತ ಎಂಬಂತಾಗಿದೆ. ಒಂದು ವೇಳೆ ಸಂತ್ರಸ್ತೆಯರು ಮೈಸೂರಿನಲ್ಲಿ ನೀಡಿದ ಹೇಳಿಕೆಯನ್ನೇ ಚಿತ್ರದುರ್ಗದಲ್ಲೂ ಪುನರುಚ್ಚರಿಸಿದ್ರೆ ಶ್ರೀಗಳಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಇದನ್ನೂ ಓದಿ: ಮುರುಘಾ ಶ್ರೀಗಳ ವಿರುದ್ಧ ಆರೋಪ- ಇಂದು ಜಡ್ಜ್ ಮುಂದೆ ಸಂತ್ರಸ್ತೆಯರ ಹೇಳಿಕೆ ದಾಖಲು

Live Tv

Leave a Reply

Your email address will not be published.

Back to top button