ಹಾವೇರಿ: ಗಣಪತಿ ವಿಸರ್ಜನೆ ವೇಳೆ ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಕಂಡು ಡಿಜೆ ಬಂದ್ ಮಾಡಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ನಡೆದಿದ್ದು, ಹಿಂದೂ-ಮುಸ್ಲಿಮರ ಸೌಹಾರ್ದ ಮನೋಭಾವಕ್ಕೆ ಸಾಕ್ಷಿಯಾಗಿದೆ.
Advertisement
ಗಜಾನನ ಯುವಕ ಮಂಡಳಿಯ ಸದಸ್ಯರು ಇಲ್ಲಿನ ಉಮಾಶಂಕರ ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದರು. ಗಣೇಶ ವಿಸರ್ಜನೆಯ ಮೆರವಣಿಗೆ ಎಂಜಿ ರಸ್ತೆಗೆ ಬಂದಾಗ ಅದೇ ಮಾರ್ಗದಲ್ಲಿ ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರವನ್ನು ಕಬರಸ್ತಾನ ಕಡೆಗೆ ಹೊತ್ತೊಯ್ಯುತ್ತಿದ್ದರು. ಇದನ್ನೂ ಓದಿ: ಮುರುಘಾ ಶ್ರೀಗಳ ಕೇಸ್ – 3ನೇ ಆರೋಪಿ ಮಠದ ಮರಿಸ್ವಾಮಿ ಪೊಲೀಸರ ವಶಕ್ಕೆ
Advertisement
Advertisement
ಯುವಕ ಮಂಡಳಿಯವರು ಮುಸ್ಲಿಂ ವ್ಯಕ್ತಿಯ ಶವಯಾತ್ರೆ ದಾಟಿ ಹೋಗೋವರೆಗೂ ತಾವಾಗಿಯೇ ಡಿಜೆ ಬಂದ್ ಮಾಡಿದರು. ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಹೋದ ನಂತರ ಮತ್ತೆ ಗಣೇಶ ವಿಸರ್ಜನೆ ಮೆರವಣಿಗೆ ಪ್ರಾರಂಭಿಸಿದರು. ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸಿ ಮಿಂಚಿದ ಕೊಹ್ಲಿ – THE KING IS BACK ಎಂದ ಅಭಿಮಾನಿಗಳು
Advertisement
ಒಟ್ಟಿನಲ್ಲಿ ಈ ಘಟನೆ ಹಿಂದೂ-ಮುಸ್ಲಿಮರ ಆತ್ಮೀಯತೆಗೆ ಸಾಕ್ಷಿಯಾಗಿದ್ದು, ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.