Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: WPL Champions: ʻಹೆಣ್ಮಕ್ಕಳೇ ಸ್ಟ್ರಾಂಗು ಗುರುʼ – ಆರ್‌ಸಿಬಿ ಚೊಚ್ಚಲ ಚಾಂಪಿಯನ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | WPL Champions: ʻಹೆಣ್ಮಕ್ಕಳೇ ಸ್ಟ್ರಾಂಗು ಗುರುʼ – ಆರ್‌ಸಿಬಿ ಚೊಚ್ಚಲ ಚಾಂಪಿಯನ್‌!

Cricket

WPL Champions: ʻಹೆಣ್ಮಕ್ಕಳೇ ಸ್ಟ್ರಾಂಗು ಗುರುʼ – ಆರ್‌ಸಿಬಿ ಚೊಚ್ಚಲ ಚಾಂಪಿಯನ್‌!

Public TV
Last updated: March 17, 2024 11:18 pm
Public TV
Share
4 Min Read
RCB 011
SHARE

– ರೋಚಕ ಪಂದ್ಯದಲ್ಲಿ ಆರ್‌ಸಿಬಿಗೆ 8 ವಿಕೆಟ್‌ಗಳ ಭರ್ಜರಿ ಜಯ
– ಕನ್ನಡತಿ ಕೈಚಳಕ; 3.3 ಓವರ್‌ಗಳಲ್ಲಿ 4 ವಿಕೆಟ್‌ ಪಡೆದ ಶ್ರೇಯಾಂಕಾ
– ಅಭಿಮಾನಿ ದೇವ್ರುಗಳಲ್ಲಿ ಹರ್ಷೋದ್ಘಾರ

ನವದೆಹಲಿ: 16 ಆವೃತ್ತಿ ಕಳೆದರೂ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಒಮ್ಮೆಯೂ ಟ್ರೋಫಿ ಎತ್ತಿಹಿಡಿಯದ ಆರ್‌ಸಿಬಿ ಪುರುಷರ ತಂಡಕ್ಕೆ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ತಂಡ (RCB Womens) ಮಾದರಿಯಾಗಿದೆ. ಮಹಿಳಾ ಪ್ರೀಮಿಯರ್‌ ಲೀಗ್‌ನ (WPL 2024) 2ನೇ ಆವೃತ್ತಿಯಲ್ಲೇ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದ್ದು, ಹೆಣ್ಮಕ್ಕಳೇ ಸ್ಟ್ರಾಂಗು ಗುರು ಎಂಬ ಮಾತನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

Ee Sala Cup N̶a̶m̶d̶e̶ Namdu! ????????#PlayBold #ನಮ್ಮRCB #SheIsBold #WPL2024 #WPLFinal #DCvRCB pic.twitter.com/jkubj1MRy6

— Royal Challengers Bangalore (@RCBTweets) March 17, 2024

ಕಳೆದ 16 ಆವೃತ್ತಿಗಳಿಂದ ಪುರುಷರ ತಂಡವನ್ನು ಪ್ರೋತ್ಸಾಹಿಸುತ್ತಾ ಬರುತ್ತಿದ್ದ ಅಭಿಮಾನಿಗಳಂತೂ ಮಹಿಳಾ ತಂಡದ ಗೆಲುವನ್ನು ಹೆಮ್ಮೆಯಿಂದ ಕೊಂಡಾಡಿದರು. ಕೊನೆಯ ರನ್‌ ಸಿಡಿಸುತ್ತಿದ್ದಂತೆ ಅಭಿಮಾನಿಗಳು ಮಹಿಳಾಮಣಿಗಳು ಮೈದಾನದಲ್ಲೇ ಕುಣಿದು ಕುಪ್ಪಳಿಸಿದರು. ಆರ್‌ಸಿಬಿ ಪರ ಹರ್ಷೋದ್ಘಾರ ಕೂಗುತ್ತಾ ಗೆಲುವಿನ ಕೇಕೆ ಹಾಕಿದರು. ಆದ್ರೆ ಚೊಚ್ಚಲ ಆವೃತ್ತಿಯ ಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ಸತತ 2ನೇ ಬಾರಿಯೂ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್‌ ಲೀಗ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 18.3 ಓವರ್‌ಗಲ್ಲಿ 113 ರನ್‌ ಗಳಿಗೆ ಆಲೌಟ್‌ ಆಯಿತು. 114 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿ 19.3 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 115 ರನ್‌ ಗಳಿಸಿ ಗೆಲುವು ಸಾಧಿಸಿತು.

Things we love to see ????

Our bowlers lead the chart for the most wickets in this #WPL at the end of the first innings in the Final. ????#PlayBold #ನಮ್ಮRCB #SheIsBold #WPL2024 #WPLFinal #DCvRCB pic.twitter.com/sQNGtV7ysR

— Royal Challengers Bangalore (@RCBTweets) March 17, 2024

114 ರನ್‌ಗಳ ಸುಲಭ ಗುರಿ ಬೆನ್ನತ್ತಿದ್ದ ಆರ್‌ಸಿಬಿ ಸಹ ನಿಧಾನಗತಿ ಬ್ಯಾಟಿಂಗ್‌ ನಡೆಸಿತು. ವಿಕೆಟ್‌ ತೆಗೆಯದಿದ್ದರೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಉತ್ತಮ ಫೀಲ್ಡಿಂಗ್‌ ಪ್ರದರ್ಶನ ತೋರಿತ್ತು. ಇದರಿಂದ ವಿಜಯಲಕ್ಷ್ಮಿ ಯಾರ ಪಾಲಿಗೆ ಒಲಿಯುತ್ತಾಳೆ ಎಂಬ ಕುತೂಹಲ ಕೊನೆಯವರೆಗೂ ಇತ್ತು. ಓವರ್‌ನಲ್ಲೂ ಒಂದೊಂದು ಎಸೆತವೂ ಏನಾಗುತ್ತದೆ ಎಂದು ಅಭಿಮಾನಿಗಳು ಕುತೂಹಲದಿಂದಲೇ ವೀಕ್ಷಿಸುತ್ತಾ, ಕ್ಷಣ ಕ್ಷಣಕ್ಕೂ ಆರ್‌ಸಿಬಿ ಆರ್‌ಸಿಬಿ ಘೋಷಣೆ ಕೂಗುತ್ತಿದ್ದರು. ಆರ್‌ಸಿಬಿ ಪರ ಸ್ಮೃತಿ ಮಂದಾನ 31 ರನ್‌, ಸೋಫಿ ಡಿವೈನ್‌ 32 ರನ್‌, ಗಳಿಸಿದ್ರೆ, ಕೊನೇ ವರೆಗೂ ಹೋರಾಟ ನಡೆಸಿದ ಆಲ್‌ರೌಂಡರ್‌ ಎಲ್ಲಿಸ್‌ ಪೆರ್ರಿ 35 ರನ್‌, ರಿಚಾ ಘೋಷ್‌ 17 ರನ್‌ ಗಳಿಸುವ ಮೂಲಕ ಗೆಲುವಿಗೆ ಕಾರಣರಾದರು.

49 ರನ್‌ಗಳಿಗೆ 10 ವಿಕೆಟ್‌ ಉಡೀಸ್‌:
ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪರ ನಾಯಕಿ ಮೆಗ್‌ ಲ್ಯಾನ್‌, ಶಫಾಲಿ ವರ್ಮಾ ಸ್ಫೋಟಕ ಪ್ರದರ್ಶನ ತೋರಿದ್ದರು. ಪವರ್‌ ಪ್ಲೇನಲ್ಲಿ 6 ಓವರ್‌ಗಳಿಗೆ ಯಾವುದೇ ವಿಕೆಟ್‌ ನಷ್ಟವಿಲ್ಲದೇ 61 ರನ್‌ ಬಾರಿಸಿದ್ದರು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 200 ರನ್‌ಗಳ ಗಡಿ ದಾಟಲಿದೆ ಎಂದು ನಿರೀಕ್ಷಿಸಲಾಗಿತ್ತು. ಪವರ್‌ ಪ್ಲೇ ಮುಗಿಯುತ್ತಿದ್ದಂತೆ ಪೆವಿಲಿಯನ್‌ ಪೆರೇಡ್‌ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಮುಂದಿನ 49 ರನ್‌ ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡಿತು.

RCB 7

ಆರ್‌ಸಿಬಿಗೆ ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
ಪವರ್‌ಪ್ಲೇ ನಲ್ಲಿ ಕಳಪೆ ಬೌಲಿಂಗ್‌ ಹಾಗೂ ಫೀಲ್ಡಿಂಗ್‌ ಪ್ರದರ್ಶನದಿಂದಾಗಿ 6 ಓವರ್‌ಗಳಲ್ಲಿ 61 ರನ್‌ ಚಚ್ಚಿಸಿಕೊಂಡಿದ್ದ ಆರ್‌ಸಿಬಿ, ನಂತರ ಡೆಲ್ಲಿ ಆಟಕ್ಕೆ ಬ್ರೇಕ್‌ ಹಾಕಿತು. 8ನೇ ಓವರ್‌ನಲ್ಲಿ ಬೌಲಿಂಗ್‌ಗೆ ಇಳಿದ ಸೋಫಿ ಮೊಲಿನೆಕ್ಸ್ ಮೊದಲ 4 ಎಸೆತಗಳಲ್ಲೇ ಅಗ್ರ ಕ್ರಮಾಂಕದ 3 ವಿಕೆಟ್‌ (ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗ್ಸ್‌, ಅಲಿಸ್‌ ಕ್ಯಾಪ್ಸಿ) ಉರುಳಿಸಿ, ಕೇವಲ 1 ರನ್‌ ಬಿಟ್ಟುಕೊಟ್ಟರು. ಇದರಿಂದ 7 ಓವರ್‌ಗಳಲ್ಲಿ 64 ರನ್‌ ಗಳಿಸಿದ್ದ ಡೆಲ್ಲಿ ತಂಡ 81 ರನ್‌ ಗಳಿಸುವ ವೇಳೆಗೆ ಕೇವಲ 17 ರನ್‌ಗಳ ಅಂತರದಲ್ಲೇ ಪ್ರಮುಖ 6 ವಿಕೆಟ್‌ ಕಳೆದುಕೊಂಡಿತ್ತು. ಇದು ಆರ್‌ಸಿಬಿಗೆ ಬಹುದೊಡ್ಡ ಲಾಭವಾಯಿತು. ಅಲ್ಲಿಂದ ಒಂದೊಂದು ರನ್‌ ಕದಿಯುವುದಕ್ಕೂ ಹೆಣಗಾಡುತ್ತಿದ್ದ ಡೆಲ್ಲಿ ತಂಡ ವಿಕೆಟ್‌ಗಳನ್ನು 113 ರನ್‌ಗಳಿಗೆ ಆಲೌಟ್‌ ಆಯಿತು.

WPL RCB

ಡೆಲ್ಲಿ ಕ್ಯಾಪಿಟಲ್ಸ್‌ ಪರ ಸ್ಫೋಟಕ ಪ್ರದರ್ಶನ ನೀಡಿದ ಶಫಾಲಿ ವರ್ಮಾ 27 ಎಸೆತಗಳಲ್ಲಿ 44 ರನ್‌ ಚಚ್ಚಿದರೆ (3 ಸಿಕ್ಸರ್‌, 2 ಬೌಂಡರಿ), ಮೆಗ್‌ ಲ್ಯಾನಿಂಗ್‌ 23 ರನ್‌, ರಾಧಾ ಯಾಧವ್‌ 12 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ಜೆಮಿಮಾ ರೊಡ್ರಿಗ್ಸ್‌, ಅಲಿಸ್‌ ಕ್ಯಾಪ್ಸಿ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದ್ರೆ, ಜೆಸ್‌ ಜೊನಾಸೆನ್‌ 3 ರನ್‌, ಮಾರಿಜಾನ್ನೆ ಕಪ್‌ 8 ರನ್‌, ಮಿನ್ನು ಮಣಿ 5 ರನ್‌, ಅರುಂಧತಿ ರೆಡ್ಡಿ 10 ರನ್‌, ಶಿಖಾ ಪಾಂಡೆ 5 ರನ್‌ ಗಳಿಸಿದರು.

ಕನ್ನಡತಿಯ ಕೈಚಳಕ:
ಆರ್‌ಸಿಬಿ ಪರ ಬೌಲಿಂಗ್‌ ಕೈಚಳಕ ತೋರಿದ ಕನ್ನಡತಿ ಶ್ರೇಯಾಂಕಾ ಪಾಟೀಲ್ 3.3 ಓವರ್‌ಗಳಲ್ಲಿ ಕೇವಲ 12 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಕಿತ್ತರೆ, ಸೋಫಿ ಮೊಲಿನೆಕ್ಸ್ 3 ವಿಕೆಟ್‌ ಹಾಗೂ ಆಶಾ ಸೋಭನಾ 2 ವಿಕೆಟ್‌ ಪಡೆದು ಮಿಂಚಿದರು.

TAGGED:DC vs RCBDC WomenEllyse PerryMeg LanningRCB WomenShafali VermaShreyanka PatilSmriti MandhanaWPL 2024
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
5 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
6 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
6 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
7 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
7 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?