ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ, ರಾಷ್ಟ್ರನಾಯಕ ದಿ.ಎಸ್ ನಿಜಲಿಂಗಪ್ಪ (S. Nijalingappa) ಅವರ ಮನೆಯನ್ನು ರಾಜ್ಯ ಸರ್ಕಾರ 5 ಕೋಟಿಗೆ ಖರೀದಿ ಮಾಡಿದೆ.
ನಿಜಲಿಂಗಪ್ಪ ಅವರ ಮನೆ ಖರೀದಿಸಿ, ಸಂರಕ್ಷಿಸಿ ಅಭಿವೃದ್ಧಿಪಡಿಸಲು ಸರ್ಕಾರ ಸಜ್ಜಾಗಿದ್ದು, 5 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. 2 ಕೋಟಿ ಹಣವನ್ನು ಚಿತ್ರದುರ್ಗ (Chitradurga) ಡಿಸಿ ಖಾತೆಗೆ ಸರ್ಕಾರ ಬಿಡುಗಡೆಗೊಳಿಸಿದೆ. ಪುತ್ರ ಕಿರಣ್ ಶಂಕರ್ ನಿಜಲಿಂಗಪ್ಪ ಮನೆ ಮಾರಾಟಕ್ಕಿದೆ ಎಂದು ಜಾಹೀರಾತು ನೀಡಿದ್ದ ಹಿನ್ನೆಲೆ ಚಿತ್ರದುರ್ಗದ ಡಿಸಿ ನಿವಾಸದ ಬಳಿಯಿರುವ ಎಸ್ ನಿಜಲಿಂಗಪ್ಪ ನಿವಾಸವನ್ನು ಸರ್ಕಾರ ಖರೀದಿಸಿದೆ. ಇದನ್ನೂ ಓದಿ: ಬೆಂಗಳೂರಿನ ಪ್ರಸಿದ್ಧ ಬಸವನಗುಡಿ, ಮಲ್ಲೇಶ್ವರಂ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ
Advertisement
Advertisement
ಈ ಹಿಂದೆ ಕೆಪಿಸಿಸಿಯಿಂದ (KPCC) ನಿಜಲಿಂಗಪ್ಪ ಮನೆ ಖರೀದಿ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿತ್ತು. ಇದೇ ವಿಚಾರವಾಗಿ ಸೆಪ್ಟೆಂಬರ್ 2 ರಂದು ನಿಜಲಿಂಗಪ್ಪ ನಿವಾಸಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಭೇಟಿ ನೀಡಿದ್ದರು. ಪುತ್ರ ಕಿರಣ್ ಜೊತೆ ಕೆಲಹೊತ್ತು ಚರ್ಚೆ ನಡೆಸಿದ್ದರು. ನಿಜಲಿಂಗಪ್ಪ ನಿವಾಸ ಖರೀದಿಸಿ ಕಾಂಗ್ರೆಸ್ ಕಚೇರಿ ತೆರೆಯುವ ಪ್ಲ್ಯಾನ್ ಅನ್ನು ಕೆಪಿಸಿಸಿ ಮಾಡಿತ್ತು. ಕಾಂಗ್ರೆಸ್ ನಾಯಕರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಮನೆ ಮಾರಾಟಕ್ಕಿದೆ ಎಂದು ಕಿರಣ್ ಜಾಹೀರಾತು ನೀಡಿದ್ದರು. ಸದ್ಯ ನಿಜಲಿಂಗಪ್ಪ ಪುತ್ರ ಕಿರಣ್ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಇದನ್ನೂ ಓದಿ: ನಮ್ಮ ಪಕ್ಷದ 50 ಶಾಸಕರಿಗೆ ಬಿಜೆಪಿಯಿಂದ ತಲಾ 50 ಕೋಟಿ ಆಫರ್ ಬಂದಿತ್ತು: ಸಿಎಂ ಬಾಂಬ್
Advertisement