– ಮುಡಾ ಮಾಜಿ ಆಯುಕ್ತರಿಗೆ ಬಿಗ್ ಶಾಕ್
ಹಾವೇರಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್ ಅವರನ್ನು ಅಮಾನತುಗೊಳಿಸಿದ ಸರ್ಕಾರ ಇದೀಗ ಮತ್ತೊಂದು ಬಿಗ್ ಶಾಕ್ ನೀಡಿದೆ. ಹಾವೇರಿ ವಿವಿಯ ಕುಲಸಚಿವರಾಗಿ ಜಿ.ಟಿ.ದಿನೇಶ್ ಕುಮಾರ್‌ರನ್ನು ಸರ್ಕಾರ ನೇಮಕಾತಿ ಮಾಡಿತ್ತು. ಇದೀಗ ಆದೇಶವನ್ನು ದಿಢೀರ್ ರದ್ದು ಮಾಡಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಕೋರ್ಟ್‌ನಲ್ಲಿ ಹೋರಾಟ: ಜಿ.ಪರಮೇಶ್ವರ್
ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು. ಯಾವುದೇ ಸ್ಥಳ ತೋರಿಸದೇ ದಿನೇಶ್ ಕುಮಾರ್‌ನನ್ನು ವರ್ಗಾವಣೆ ಮಾಡಿ ನಂತರ ಹಾವೇರಿ ವಿವಿಯ ಕುಲಸಚಿವ ಹುದ್ದೆಯನ್ನು ನೀಡಿತ್ತು.
ಈಗ ಮತ್ತೆ ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ ಆದೇಶವನ್ನು ರದ್ದು ಮಾಡಿದೆ. ಇದನ್ನೂ ಓದಿ: ಬಂಗಾಳ ವಿಧಾನಸಭೆಯಲ್ಲಿ ಅತ್ಯಾಚಾರ ವಿರೋಧಿ ಮಸೂದೆ ಮಂಡನೆ
2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ಮುಡಾ ಹಗರಣದ ನಂತರ ಹಾವೇರಿ ವಿವಿಯ ಕುಲಸಚಿವರಾಗಿ ವರ್ಗಾವಣೆ ಮಾಡಿದ್ದು ಬಹಳ ಚರ್ಚೆಗೆ ಗ್ರಾಸವಾಗಿತ್ತು.