ಬೆಂಗಳೂರು: ಬೇಸಿಗೆ ಹಿನ್ನೆಲೆ ಏಪ್ರಿಲ್ 5ರ ನಂತರ ಕುಡಿಯಲಷ್ಟೇ ತುಂಗಭದ್ರಾ ಕಾಲುವೆಗಳಲ್ಲಿ (Tungabhadra Canal) ನೀರು ಹರಿಸಲು ಸರ್ಕಾರ ತೀರ್ಮಾನಿಸಿದೆ.
ಏಪ್ರಿಲ್ 5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು (Drinking Water) ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸಿಎಸ್ ಶಾಲಿನಿ ರಜನೀಶ್ (CS Shalini Rajanish) ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ: ಲಕ್ಷಾಂತರ ಮಂದಿ ಭಾಗಿ
ಈ ಸಂಬಂಧ ಟಿಪ್ಪಣಿ ಹೊರಡಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್, ಭದ್ರಾ ಜಲಾಶಯದಲ್ಲಿ ಪ್ರಸ್ತುತ 28 ಟಿಎಂಸಿ ನೀರು ಸಂಗ್ರಹವಾಗಿದೆ. ಮೇ 8ರವರೆಗೆ 11 ಟಿಎಂಸಿ ನೀರು ನೀರಾವರಿಗಾಗಿ ಅಗತ್ಯವಿದೆ. ಜಲಾಶಯದ ಎಂಜಿನಿಯರ್‌ಗಳ ಲೆಕ್ಕಾಚಾರದ ಪ್ರಕಾರ, ಮೇಲ್ದಂಡೆ ಮತ್ತು ಕೆಳದಂಡೆ ಸೇರಿದಂತೆ 14 ಟಿಎಂಸಿ ಕುಡಿಯುವ ನೀರಿನ ಅವಶ್ಯಕತೆ ಇದೆ. ಇದರಿಂದ ಉಳಿದ ಶುದ್ಧ ಲಭ್ಯತೆ ಕೇವಲ 3 ಟಿಎಂಸಿ ಆಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇರಾನ್ ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್ ದಾಳಿ ಮಾಡುತ್ತೇನೆ: ಟ್ರಂಪ್ ಬೆದರಿಕೆ
ತುಂಗಭದ್ರಾ ಜಲಾಶಯದಲ್ಲಿ ಕುಡಿಯುವ ನೀರಿಗಾಗಿ ಕನಿಷ್ಠ 3.5 ಟಿಎಂಸಿ ನೀರಿನ ಸಂಗ್ರಹ ಅಗತ್ಯವಿರುತ್ತದೆ. ಆದ್ದರಿಂದ ಕೊಪ್ಪಳ ಜಿಲ್ಲೆಯ ರೈತರ ನೀರಾವರಿ ಅಗತ್ಯಗಳನ್ನು ಪರಿಗಣಿಸಿ, ಭದ್ರಾದಿಂದ 2 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಇದರಿಂದಾಗಿ ತುಂಗಭದ್ರಾ ಕಾಲುವೆಗಳಿಗೆ ಏಪ್ರಿಲ್ 1ರಿಂದ ಏಪ್ರಿಲ್ 5ರವರೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಜನರಿಗೆ ಕುಡಿಯುವ ನೀರಿಗಾಗಿ ಮತ್ತು ಬೆಳೆಗಳನ್ನು ಉಳಿಸಿಕೊಳ್ಳಲು ನೀರು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬದ ಮುನ್ನಾ ದಿನ ಹಾಸ್ಟೆಲ್‌ನ 5ನೇ ಮಹಡಿಯಿಂದ ಹಾರಿ IIIT ವಿದ್ಯಾರ್ಥಿ ಆತ್ಮಹತ್ಯೆ
ಏಪ್ರಿಲ್ 5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು. ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ, ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆ – ಸಿಡಿಲು ಬಡಿದು ವೃದ್ಧ ಸಾವು