Bengaluru CityDistrictsKarnatakaLatestLeading NewsMain Post

BBMP: ವಾರ್ಡ್‌ವಾರು ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ

-ವಾರ್ಡ್‌ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಆದೇಶ

ಬೆಂಗಳೂರು: ಬಿಬಿಎಂಪಿ ವಾರ್ಡ್‌ವಾರು ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಲಾಗಿದ್ದು, ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ.

2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 243 ವಾರ್ಡ್‌ವಾರು ಮೀಸಲಾತಿಯನ್ನು ಅಂತಿಮಗೊಳಿಸಿದೆ. 243 ವಾರ್ಡ್ ಗಳ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಆದೇಶ ಹೊರಬಿದ್ದಿದೆ. ಇದನ್ನೂ ಓದಿ: ಕೊರೊನಾದಿಂದ US ಅಧ್ಯಕ್ಷ ಜೋ ಬೈಡನ್ ಗುಣಮುಖ – ಪತ್ನಿಗೆ ಸೋಂಕು

ಇದರ ಕರಡು ಅಧಿಸೂಚನೆಯನ್ನು ಆಗಸ್ಟ್ 3 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗಿತ್ತು. ಬಂದ ಆಕ್ಷೇಪಣಿಗಳನ್ನು ಪರಿಶೀಲಿಸಿ ಈಗ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ.

ಬಿಬಿಎಂಪಿ ಚುನಾವಣೆ ಸಂಬಂಧ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಹಿಂದೆ 8 ವಾರಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿತ್ತು. ಇದನ್ನು ಪಾಲಿಸದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ಒಂದು ವಾರದ ಒಳಗೆ ಮೀಸಲಾತಿ ಪ್ರಕಟಿಸುವಂತೆ ಸೂಚಿಸಿತ್ತು. ಹೀಗಾಗಿ ಆಗಸ್ಟ್ 3ರ ಬುಧವಾರ ಸಂಜೆ ಈ ಮೀಸಲಾತಿಯ ಕರಡು ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದರಿಂದಾಗಿ ಚುನಾವಣಾ ಆಯೋಗಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿತ್ತು. ಇದನ್ನೂ ಓದಿ: 500 ರೂ.ಗಾಗಿ ಸ್ನೇಹಿತನ ಶಿರಚ್ಛೇದ- ತಲೆಯನ್ನು ಪೊಲೀಸ್ ಠಾಣೆಗೆ ತೆಗೆದೊಯ್ದ

ಅಂತೆಯೇ ಈಗ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಬಿಬಿಎಂಪಿ ಅಧಿನಿಯಮ 2020 ಕಲಂ 8(3)ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ಬಿಬಿಎಂಪಿ ವಾರ್ಡ್‌ವಾರು ಮೀಸಲಾತಿಯನ್ನು ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಿದೆ.

Live Tv

Leave a Reply

Your email address will not be published.

Back to top button