– ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು ಎಂದ ಕಾಂಗ್ರೆಸ್ ನಾಯಕ
ಬೆಂಗಳೂರು: ಅಯೋಧ್ಯೆಗೆ (Ayodhya Ram Mandir) ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂದು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ (B.K.Hariprasad) ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.
Advertisement
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ವಿರುದ್ಧ ಅಕ್ರಮ ಸಾರಾಯಿ, ಮಟ್ಕಾ, ಜೂಜಾಟ ಸೇರಿ 16 ಕೇಸ್‌ಗಳಿವೆ: ಹು-ಧಾ ಪೊಲೀಸ್ ಕಮಿಷನರ್
Advertisement
Advertisement
ಮೋದಿಯ ಧರ್ಮವೇ ಇನ್ನೂ ಯಾವುದು ಅಂತ ಗೊತ್ತಾಗಿಲ್ಲ. ಅಮಿತ್ ಶಾ ಧರ್ಮವೇ ಯಾವುದೂ ಅಂತ ಗೊತ್ತಾಗಿಲ್ಲ. ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು. ನಮಗೆ ಮಾಹಿತಿ ಸಿಗ್ತಾ ಇದೆ. ಮಾಹಿತಿ ಇದ್ದೇ ಹೇಳ್ತಾ ಇದ್ದೇನೆ. ಇವು ನನ್ನ ವೈಯಕ್ತಿಕ ಹೇಳಿಕೆ, ಪಕ್ಷಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಕರಸೇವಕರ ಬಂಧನ ಕುರಿತು ಮಾತನಾಡಿ, ಹೋರಾಟಕ್ಕೂ ಅಪರಾಧಕ್ಕೂ ವ್ಯತ್ಯಾಸ ಇದೆ. ಕರಸೇವಕ ಅಂತಾ ಯಾವುದೋ ಅಪರಾಧ ಪ್ರಕರಣದಲ್ಲಿ ಇರುವವರನ್ನು ಹಾಗೆಯೇ ಬಿಡಲು ಆಗುವುದಿಲ್ಲ. ಬಂಧಿತನ ಮೇಲೆ 13 ಕೇಸ್ ಇದೆ. ಕಾನೂನುಬಾಹಿರ ಅಪರಾಧ ಮಾಡಿದ್ದಾರೆ. ಧರ್ಮದ ಹೆಸರಲ್ಲಿ ಏನೇನು ಕೆಲಸ ಮಾಡಿದ್ದಾರೆ ಅಂತಾ ಗೊತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಸೀದಿಯವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಳ್ಳುತ್ತಾರೆ, ದೇವಿ ದರ್ಶನಕ್ಕೆ ಸಮಯವಿಲ್ಲ: ಸಿದ್ದು ವಿರುದ್ಧ ಬಿಜೆಪಿ ಕಿಡಿ
ಬಿಜೆಪಿಯವರು ಈಗ ಬೊಬ್ಬೆ ಹೊಡೆಯುತ್ತಿದ್ದಾರೆ. ಶಾಂತಿ ಕದಡುವ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲೇಬೇಕು. 30 ವರ್ಷ ಅವರನ್ನು ಬಿಟ್ಟಿದ್ದೇ ತಪ್ಪು. ಬಾಬರಿ ಮಸೀದಿ ಧ್ವಂಸ ಮಾಡಿದ್ದು, ಅಪರಾಧವೇ. ಎಲ್.ಕೆ.ಅಡ್ವಾಣಿಯವರ ಮೇಲೆ ಇರುವ ಕೇಸೇ ಇನ್ನೂ ಕ್ಲಿಯರ್ ಆಗಿಲ್ಲ. ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಇಷ್ಟು ದಿನ ಹಳೆ ಕೇಸ್ ಮೇಲೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಹಾಗೇ ಬಿಟ್ಟಿದ್ದೇ ತಪ್ಪು ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಗೋದ್ರಾ ಹತ್ಯಾಕಾಂಡ ಕರಾಳತೆ
2002 ರ ಫೆ.27 ರಂದು ಸಬರಮತಿ ಎಕ್ಸ್‌ಪ್ರೆಸ್ ರೈಲಿನ ಎಸ್-6 ಬೋಗಿಗೆ ಬೆಂಕಿ ಹಚ್ಚಿದ್ದರಿಂದ 59 ಕರಸೇವಕರ ಸಜೀವ ದಹನ ಆಗಿತ್ತು. ಗೋದ್ರಾ ರೈಲು ಹತ್ಯಾಕಾಂಡದ (Godhra Riots) ಬಳಿಕ ಗುಜರಾತ್‌ನ ಅನೇಕ ಕಡೆಗಳಲ್ಲಿ ಕೋಮು ಗಲಭೆ ಆಗಿತ್ತು. ಇದರಿಂದ 1,200 ಮಂದಿಯ ಹತ್ಯೆಯಾದರು. ಸತ್ತವರಲ್ಲಿ ಬಹುತೇಕರು ಮುಸ್ಲಿಮರಾಗಿದ್ದರು. ಇದನ್ನೂ ಓದಿ: ಹುಬ್ಬಳ್ಳಿ ಕರಸೇವಕರ ಬಂಧನ ಕೇಸ್ – ಹೈಕಮಾಂಡ್‌ಗೆ ವರದಿ ನೀಡಿದ ಕಾಂಗ್ರೆಸ್
ರೈಲು ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರೆಂದು ಪರಿಗಣಿಸಲಾಗಿದ್ದ 31 ಜನರ ಪೈಕಿ 11 ಮಂದಿಗೆ ಮರಣದಂಡನೆ ಮತ್ತು ಇತರ 20 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು.