– ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಆರೋಪ
ಬೆಂಗಳೂರು: ಅವೈಜ್ಞಾನಿಕ ನೀತಿಗಳಿಂದ ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಗಳು ಸಂಭವಿಸಿ ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದು ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಗೌರವ ಅಧ್ಯಕ್ಷ ಸಿದ್ದರಾಜು, ಅಧ್ಯಕ್ಷ ರವೀಂದ್ರ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಅವರು ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಲ್ಲು ಗಣಿಗಾರಿಕೆ ಉದ್ಯಮದಲ್ಲಿ ಸಕ್ರಮ ಗಣಿಗಾರಿಕೆ ನಿಯಮಗಳನ್ನು ಸರ್ಕಾರ ಸರಿಪಡಿಸುತ್ತಿಲ್ಲ. ಈ ಪರಿಣಾಮ ಅಕ್ರಮ ಗಣಿಗಾರಿಕೆ ಮತ್ತು ರಾಜ್ಯ ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಗಳು ಸಂಭವಿಸಿ ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍ಡಿಕೆ
Advertisement
Advertisement
ಕಲ್ಲುಗಣಿಗಾರಿಕೆ ಮತ್ತು ಕ್ರಷರ್ ಉದ್ಯಮಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮುಂದಿನ ಮೂರು ತಿಂಗಳಲ್ಲಿ ವೈಜ್ಞಾನಿಕ ನೀತಿಯನ್ನು ರೂಪಿಸಬೇಕು. ಇಲ್ಲದಿದ್ದರೆ ಕಲ್ಲುಗಣಿಗಾರಿಕೆ ಹಾಗೂ ಕ್ರಷರ್ ಉದ್ಯಮವನ್ನು ರಾಜ್ಯಾದ್ಯಂತ ಅನಿರ್ದಿಷ್ಟ ಕಾಲ ಮುಚ್ಚಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Advertisement
ಕಲ್ಲು ಗಣಿಗಾರಿಕೆ ಮತ್ತು ಕ್ರಷರ್ ಉದ್ಯಮ ಅನಿರ್ದಿಷ್ಟ ಕಾಲ ಮುಚ್ವಿ ಪ್ರತಿಭಟನೆ ನಡೆಸುವುದರಿಂದ ಮೆಟ್ರೋ ರೈಲು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಹಿತ ಸರ್ಕಾರ ಮತ್ತು ಖಾಸಗಿ ವಲಯದ ನಿರ್ಮಾಣ ಕಾಮಗಾರಿಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಾಡಹಗಲಲ್ಲೇ ಸರ್ಕಾರಿ ಕಚೇರಿಗೆ ನುಗ್ಗಿ ಮೂವರು ಮಹಿಳೆಯರಿಗೆ ಕತ್ತಿಯಿಂದ ಕಡಿದ ದುಷ್ಕರ್ಮಿ
Advertisement
ಕಲ್ಲು ಗಣಿಗಾರಿಕೆ ಬ್ಲಾಸ್ಟಿಂಗ್ ಕಾರ್ಯಾಚರಣೆಗೆ ಡಿಜಿಎಂಎಸ್ ವತಿಯಿಂದ ಅನುಮತಿ ನೀಡುವುದು ವಿಳಂಬವಾಗುತ್ತಿದೆ. ಅದಕ್ಕೆ ಕಟ್ಟಡಕಲ್ಲು ಹಾಗೂ ಜಲ್ಲಿ ಸರಬರಾಜಿನಲ್ಲಿ ವ್ಯತ್ಯಾಸವಾಗಲಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮವಾಗಿ ಸರಬರಾಜಾಗುವ ಜಲ್ಲಿಕಲ್ಲು ಹಾಗೂ ಮರಳುಗಳಿಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.