ಬೆಂಗಳೂರು: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಹಿರಿಯ ಚೇತನರನ್ನು ಸನ್ಮಾನಿಸಲಿದ್ದಾರೆ.
ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ ದಿನವಾದ ಆಗಸ್ಟ್ 9 ರಂದು ಬೆಳಗ್ಗೆ 10:30 ಗಂಟೆಗೆ ನಗರದ ಮಲ್ಲೇಶ್ವರಂ ಬಡಾವಣೆಯಲ್ಲಿರುವ ವಿ. ನಾಗಭೂಷಣ ರಾವ್ ಅವರ ಮನೆಗೆ ತೆರಳಿ ರಾಜ್ಯಪಾಲರು ಸನ್ಮಾನಿಸಿ ಗೌರವ ಅರ್ಪಿಸಲಿದ್ದಾರೆ. ಇದನ್ನೂ ಓದಿ: ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ : ಅಮಿತ್ ಶಾ ವಿರುದ್ಧ ಸಿದ್ದು ಕಿಡಿ
Advertisement
Advertisement
ಅದೇ ದಿನ ಬೆಳಗ್ಗೆ 11-00 ಗಂಟೆಗೆ ಹಲಸೂರು ಬಡಾವಣೆಯಲ್ಲಿರುವ ಆರ್. ನಾರಾಯಣಪ್ಪ ಅವರ ಮನೆಗೆ ತೆರಳಿ ಸನ್ಮಾನಿಸಲಿದ್ದಾರೆ. ಇದನ್ನೂ ಓದಿ: ತ್ಯಾಗ, ಬಲಿದಾನಗಳ ಸ್ಮರಣೆಯೇ ಅಮೃತ ಮಹೋತ್ಸವ: ಅಶ್ವಥ್ನಾರಾಯಣ
Advertisement
ಸ್ವಾತಂತ್ರ್ಯಕ್ಕೆ ಶ್ರಮಿಸಿದ ಇನ್ನುಳಿದ ಸ್ವಾತಂತ್ರ್ಯ ಹೋರಾಟಗಾರರನ್ನು ಅವರ ಮನೆಗಳಿಗೇ ತೆರಳಿ ಜಿಲ್ಲಾಡಳಿತದ ಮೂಲಕ ಅವರ ಮನೆಗಳಲ್ಲೇ ಸನ್ಮಾನಿಸಲು ಕ್ರಮ ವಹಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಜ್ಯಪಾಲರು ಸೂಚಿದ್ದಾರೆ.