ಬೆಂಗಳೂರು: ಕೇಂದ್ರ ಸರ್ಕಾರದ ಹಿಂದಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಘೋಷಿಸಿರುವ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ತಿಳಿಸಿದ್ದಾರೆ.
ಶನಿವಾರ ಮಂಡನೆ ಆಗಲಿರುವ ಕೇಂದ್ರ ಬಜೆಟ್ ಹಿನ್ನೆಲೆಯಲ್ಲಿ ರಾಜ್ಯದ ಬೇಡಿಕೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ನಮ್ಮ ಬೇಡಿಕೆಗಳನ್ನು ಲಿಖಿತವಾಗಿ ಮತ್ತು ಮನವಿ ರೂಪದಲ್ಲಿ ಸಲ್ಲಿಸಿದ್ದೇವೆ. ಈ ಹಿಂದಿನ ವರ್ಷಗಳಲ್ಲಿ ಕೇಂದ್ರ, ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡಿದೆ. ಆದರೂ ಜನರ ಪರವಾಗಿ ನಮ್ಮ ಹಕ್ಕು ಪ್ರತಿಪಾದನೆ ಮಾಡುವ ಕೆಲಸ ಮಾಡಿದ್ದೇವೆ. ನಮಗೆ ಹೊಸಸ ನುದಾನ ಕೊಡದೇ ಹೋದರೂ ಹಿಂದಿನ ವರ್ಷಗಳಲ್ಲಿ ಘೋಷಣೆ ಮಾಡಿರುವ ಅನುದಾನ ಕೊಟ್ಟರೆ ಸಾಕಾಗಿದೆ ಎಂದರು.ಇದನ್ನೂ ಓದಿ: ಫಿಲ್ಮಿ ಸ್ಟೈಲ್ ರೌಡಿಗಳಂತೆ ಯುವತಿಯರಿದ್ದ ಕಾರನ್ನ ಬೆನ್ನಟ್ಟಿದ್ದ ಯುವಕರು – ವಿಡಿಯೋ ವೈರಲ್
ರಾಜ್ಯಕ್ಕೆ ಹಿಂದಿನ ಹಣಕಾಸು ಆಯೋಗ 11,495 ಸಾವಿರ ಕೋಟಿ ರೂ. ವಿಶೇಷ ಅನುದಾನ ಕೊಡಲು ಶಿಫಾರಸು ಮಾಡಿತ್ತು. ಅದನ್ನ ಕೊಡಲಿಲ್ಲ. ಈ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯ ಮಾಡಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5 ಸಾವಿರ ಕೋಟಿ ರೂ. ಹಣ ಕೊಡಬೇಕು. ಮೇಕೆದಾಟು ಯೋಜನೆ, ಕಳಸಾ-ಬಂಡೂರಿ ಯೋಜನೆಗೆ ಅನುಮತಿ ಕೊಡಬೇಕು. ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗ, ಮಲೆನಾಡು ಕರ್ನಾಟಕ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಕೊಡಬೇಕು. ಪಿಂಚಣಿ ಯೋಜನೆಗೆ ಕೇಂದ್ರ ಕೊಡುವ ಮೊತ್ತವನ್ನು ಹೆಚ್ಚಳ ಮಾಡಲು ಮನವಿ ಮಾಡ್ತಿದ್ದೇವೆ. ಪ್ರಧಾನಿಮಂತ್ರಿ ಆವಾಸ್ ಯೋಜನಡಿ ಮನೆ ಕಟ್ಟಿಕೊಡಲು ಕೇಂದ್ರ ಕೊಡುವ ಹಣವನ್ನು ಹೆಚ್ಚಳ ಮಾಡಬೇಕು. ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಬಿಸಿಯೂಟ ಮಾರುವವರಿಗೆ ಕೇಂದ್ರದ ಗೌರವ ಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯ ಮಾಡಿದ್ದೇವೆ ಎದು ಹೇಳಿದರು.
ಇನ್ನೂ ಇದೇ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಕುಟುಂಬದವರಿಂದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದ ತನಿಖೆಗೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ಹೈಕೋರ್ಟ್ ಸರ್ಕಾರಿ ಜಮೀನು ಒತ್ತುವರಿ ಆಗಿರುವ ಬಗ್ಗೆ ತೀಕ್ಷ್ಣವಾಗಿ ಸೂಚನೆಯನ್ನು ಕೊಟ್ಟಿದೆ. ಫೆಬ್ರವರಿ 21ರ ಒಳಗೆ ತನಿಖಾ ವರದಿಯನ್ನು ಕೋರ್ಟ್‌ಗೆ ಸಲ್ಲಿಸುತ್ತೇನೆ. ತನಿಖೆಗೆ 3 ತಿಂಗಳು ಸಮಯ ಕೇಳಿದ್ದೆವು. ಆದರೆ ಕೋರ್ಟ್ ಸಮಯ ಕೊಡಲಿಲ್ಲ. ಹೀಗಾಗಿ ಕೋರ್ಟ್ ಕೊಟ್ಟಿರುವ ಅವಧಿಯಲ್ಲಿ ತನಿಖೆ ಮಾಡಿ ವರದಿ ಕೋರ್ಟ್‌ಗೆ ಸಲ್ಲಿಕೆ ಮಾಡ್ತೀವಿ ಎಂದು ತಿಳಿಸಿದರು.ಇದನ್ನೂ ಓದಿ: ಅತ್ಯಾಚಾರ ಪ್ರಕರಣ; ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಬಂಧನ