ಮುಂಬೈ: ಕಳ್ಳನನ್ನು ಹಿಡಿಯಲು ಮಫ್ತಿಯಲ್ಲಿ ಬಂದ ಪೊಲೀಸರನ್ನು ಮಕ್ಕಳ ಕಳ್ಳರೆಂದು ಭಾವಿಸಿ ಸ್ಥಳೀಯರು ಅವರಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.
ಈ ಹಲ್ಲೆಗೆ ಸಂಬಂಧಪಟ್ಟಂತೆ ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ನೋಂದಾಯಿಸಲಾಗಿದೆ ಮತ್ತು ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳು ತನಿಖೆ ನಡೆಸುತ್ತಿದೆ.
Advertisement
ಏನಿದು ಘಟನೆ?
ಕಳ್ಳನನ್ನು ಹಿಡಿಯಲು ಪೊಲೀಸ್ ಅಧಿಕಾರಿಗಳು ಮಫ್ತಿಯಲ್ಲಿ ಬಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಳ್ಳ ಸ್ಥಳೀಯರಿಗೆ ಇವರು ಮಕ್ಕಳು ಕಳ್ಳರು ಎಂಬ ವಂದತಿಯನ್ನು ಹರಡಿಸಿದ್ದಾರೆ. ಹೀಗಾಗಿ ಸ್ಥಳೀಯರು ಕಳ್ಳನ ಮಾತು ಕೇಳಿ ಪೊಲೀಸರ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸುತ್ತಾರೆ. ಈ ಗಲಭೆಯ ವೇಳೆ ಕಳ್ಳ ಸ್ಥಳದಿಂದಲೇ ಪಾರಾರಿಯಾಗಿದ್ದಾನೆ.
Advertisement
Advertisement
ಘಟನೆ ನಡೆದ ಸ್ಥಳಕ್ಕೆ ಶಿವಾಜಿ ನಗರ ಪೊಲೀಸ್ ಠಾಣೆಯ ಪಿಸಿಆರ್ ವ್ಯಾನ್ ಆಗಮಿಸಿದ ನಂತರ ಇಬ್ಬರು ಪೊಲೀಸರನ್ನು ರಕ್ಷಿಸಿ, ಗಲಭೆಯನ್ನು ಹತೋಟಿಗೆ ತರಲು ಸಾಧ್ಯವಾಗಿತ್ತು. ಸ್ಥಳೀಯರಿಂದ ಹಲ್ಲೆಗೊಳಗಾದ ಪೊಲೀಸರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳ್ಳರಿಗೆ ಸುಳ್ಳು ವಂದತಿ ಹಬ್ಬಿಸಲು ಸಹಾಯ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಸಿಸಿಟಿವಿಯ ಆಧಾರದ ಮೇರೆಗೆ ತಪ್ಪಿಸಿಕೊಂಡ ಕಳ್ಳನನ್ನು ಹಿಡಿಯಲು ಪೊಲೀಸರು ಬಲೆಬೀಸಿದ್ದಾರೆ.
Advertisement
ಶಿವಾಜಿ ನಗರ ಪೊಲೀಸ್ ಠಾಣೆಯ ಹಿರಿಯ ಇನ್ಸ್ ಪೆಕ್ಟರ್ ದೀಪಕ್ ಪಗರೆ ಸುಳ್ಳು ವದಂತಿಯನ್ನು ಹರಡಲು ಸಹಾಯ ಮಾಡಿದ ನಾಲ್ಕು ಕಳ್ಳರ ಸ್ನೇಹಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ನಾಲ್ಕು ಜನರನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv