ಚಾಮರಾಜನಗರ: ತಾಳಿ ಕಟ್ಟುವ ಮುನ್ನ ಓಡೋಡಿ ಬಂದು ವರ (Groom) ಮತದಾನ (Voting) ಮಾಡಿದ ಘಟನೆ ಚಾಮರಾಜನಗರ (Chamarajanagar) ತಾಲೂಕಿನ ಸಂತೇಮರಳ್ಳಿಯಲ್ಲಿ ನಡೆದಿದೆ.
ವಿವಾಹಕ್ಕೂ (Marriage) ಮೊದಲು ವರ ಚೇತನ್ ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಇಂದು ದೀಪಿಕಾ ಎಂಬ ವಧು ಜೊತೆ ವರ ಚೇತನ್ ಅವರ ವಿವಾಹ ನಿಗದಿಯಾಗಿತ್ತು. 9 ಗಂಟೆಗೆ ಧಾರಾ ಮುಹೂರ್ತ ಇದ್ದ ಹಿನ್ನೆಲೆ ಅದಕ್ಕೂ ಮೊದಲು ವರ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 9.21% ಮತದಾನ – ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ವೋಟ್
Advertisement
Advertisement
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಚೇತನ್, ನನ್ನ ಹಕ್ಕನ್ನು ನಾನು ಚಲಾಯಿಸಲು ಬಂದಿದ್ದೇನೆ. ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ. ಯಾರೂ ಕೂಡ ಮತದಾನದಿಂದ ವಂಚಿತರಾಗಬಾರದು. ತಾಳಿ ಕಟ್ಟುವ ಮುನ್ನ ಬಂದು ಮತದಾನ ಮಾಡಿ ನನ್ನ ಹಕ್ಕು ಚಲಾಯಿಸಿದ್ದೇನೆ ಎಂದರು. ಇದನ್ನೂ ಓದಿ: ಹಸೆಮಣೆ ಏರುವ ಮುನ್ನ ಮದುಮಗಳಿಂದ ಮೊದಲ ಮತದಾನ
Advertisement