ನವದೆಹಲಿ: ಹನಿಟ್ರ್ಯಾಪ್‍ಗೆ ಒಳಗಾಗಿ ಸೂಕ್ಷ್ಮ ಮಾಹಿತಿ ಸೋರಿಕೆಯಾಗುವ ಭೀತಿ ಹಿನ್ನೆಲೆಯಲ್ಲಿ ಸಮವಸ್ತ್ರ ಧರಿಸಿದ ಫೋಟೊಗಳನ್ನು ಹಾಗೂ ರೀಲ್ಸ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (Social Media) ಅಪ್ಲೋಡ್ ಮಾಡದಂತೆ ಕೇಂದ್ರೀಯ ಮೀಸಲು ಪಡೆಗಳಿಗೆ (Indian Army) ಸೂಚನೆ ನೀಡಲಾಗಿದೆ. ಅಲ್ಲದೇ ಅಪರಿಚಿತರೊಡನೆ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕಿಸದಂತೆ ಸೂಚಿಸಲಾಗಿದೆ.
ಮೀಸಲು ಪಡೆಯ ಹಲವು ಯೋಧರು ಸಮವಸ್ತ್ರದಲ್ಲಿ ಸೂಕ್ಷ್ಮ ಸ್ಥಳಗಳಿಂದ ವೀಡಿಯೋ ಮತ್ತು ಫೋಟೊಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಇದು ದುರ್ಬಳಕೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ (Intelligence Bureau) ಎಚ್ಚರಿಕೆ ನೀಡಿದೆ. ಎಚ್ಚರಿಕೆಯ ಬಳಿಕ ಭದ್ರತಾ ಪಡೆಗಳಿಗೆ ಆಯಾ ವಿಭಾಗದ ಮುಖ್ಯಸ್ಥರಿಂದ ಈ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕರ್ನಾಟಕದಿಂದ ಪಾಠ ಕಲಿತ ಬಿಜೆಪಿ ಹೈಕಮಾಂಡ್ – ಮಧ್ಯಪ್ರದೇಶದಲ್ಲಿ ಮಾಡಿದ ಬದಲಾವಣೆ ಏನು?
Advertisement
Advertisement
ಸಿಆರ್‌ಪಿಎಫ್, ಬಿಎಸ್‍ಎಫ್, ಐಟಿಬಿಪಿ, ಸಿಐಎಸ್‍ಎಫ್ ಸೇರಿದಂತೆ ಎಲ್ಲಾ ಮೀಸಲು ಪಡೆಗಳಿಗೆ ಈ ಸೂಚನೆ ರವಾನಿಸಲಾಗಿದೆ. ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ಸೈನಿಕರು ಸಮವಸ್ತ್ರದಲ್ಲಿ ತಮ್ಮ ಪೋಟೋ ಹಾಗೂ ವೀಡಿಯೊಗಳನ್ನು ಪೋಸ್ಟ್ ಮಾಡದಂತೆ ಖಚಿತಪಡಿಸಿಕೊಳ್ಳಬೇಕು ಎಂದು ಆಯಾ ವಿಭಾಗದ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.
Advertisement
ಸಾಮಾಜಿಕ ಮಾಧ್ಯಮ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಣೆಯನ್ನು ಖಚಿತಪಡಿಸಿಕೊಳ್ಳಬೇಕು. ವ್ಯಕ್ತಿಯ ಪರಿಶೀಲನೆಯಿಲ್ಲದೆ ಸಾಮಾಜಿಕ ಮಾಧ್ಯಮದಲ್ಲಿ ಸ್ನೇಹಿತರನ್ನಾಗಿ ಮಾಡಿಕೊಳ್ಳಬಾರದು. ಈ ಸೂಚನೆಗಳ ಉಲ್ಲಂಘನೆಯಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.
Advertisement
ಈ ಆದೇಶದ ಬೆನ್ನಲ್ಲೇ ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರು ತಮ್ಮ ಪಡೆಗಳಿಗೆ ಪತ್ರ ಬರೆದಿದ್ದಾರೆ. ಯಾವುದೇ ಶಂಕಿತ ಅಥವಾ ಬಂಧಿತ ವ್ಯಕ್ತಿಯ ಅಪರಾಧ ಬಾಕಿ ಇರುವ ವಿಚಾರಣೆಗೆ ಸಂಬಂಧಿಸಿದ ಯಾವುದೇ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳಬಾರದು. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಗೂ ಸಂದೇ ರವಾನಿಸದಂತೆ ಸೂಚಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಸಿಐಎಸ್‍ಎಫ್‍ನಲ್ಲಿ ಹನಿಟ್ರ್ಯಾಪ್ ಪ್ರಕರಣವು ಗಮನಕ್ಕೆ ಬಂದಿತ್ತು. ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್‍ನಲ್ಲಿ ಭದ್ರತೆಗೆ ನಿಯೋಜಿಸಲಾದ ಕಾನ್‍ಸ್ಟೆಬಲ್ ಪಾಕಿಸ್ತಾನದ ಮಹಿಳಾ ಗುಪ್ತಚರ ಅಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದು ಕೆಲವು ವಿವರಗಳನ್ನು ಹಂಚಿಕೊಂಡಿರಬಹುದು ಎನ್ನಲಾಗಿದೆ. ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳು ತಮ್ಮನ್ನು ಹಿರಿಯ ಅಧಿಕಾರಿಗಳು ಎಂದು ಪರಿಚಯಿಸಿಕೊಳ್ಳುವ ಮೂಲಕ ವಿವಿಧ ಪಡೆಗಳ ನಿಯಂತ್ರಣ ಕೊಠಡಿಗಳಿಗೆ ಸಂಪರ್ಕಿಸಲು ಪ್ರಯತ್ನಿಸಿದ್ದರು ಎನ್ನಲಾಗಿತ್ತು. ಇದನ್ನೂ ಓದಿ: ಆಪರೇಷನ್ ಹಸ್ತ ಚರ್ಚೆ ಬೆನ್ನಲ್ಲೇ ರಹಸ್ಯವಾಗಿ ಸಿಎಂ ಭೇಟಿಯಾದ ಮತ್ತೊಬ್ಬ ಬಿಜೆಪಿ ಶಾಸಕ
Web Stories