ಬೆಂಗಳೂರು: ದೇಶದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗ್ತಿದೆ. ದೇಶದಲ್ಲಿ ಮಂಕಿಪಾಕ್ಸ್ ಮೊದಲ ಬಲಿ ಪಡೆದ ಮೇಲೆ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದಲ್ಲೂ ಮಂಕಿಪಾಕ್ಸ್ ಬಗ್ಗೆ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ಕಂಡು ಬಂದ ಹಿನ್ನೆಲೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಸುತ್ತೋಲೆ ಹೊರಡಿಸಿದ್ದಾರೆ. ಮಾರ್ಗಸೂಚಿ ವಿಚಾರವಾಗಿ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದು, ಮಂಕಿಪಾಕ್ಸ್ ಸೋಂಕು ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಕಣ್ಗಾವಲು, ಸಾಂಸ್ಥಿಕ ಐಸೋಲೇಶನ್‍ಗಾಗಿ ಸೂಕ್ತ ಸ್ಥಳಗಳನ್ನು ಗೊತ್ತು ಪಡಿಸುವುದು, ಕಡ್ಡಾಯ ಸಂಪರ್ಕ ಪತ್ತೆ ಮತ್ತು ಸ್ಯಾಂಪಲ್‍ಗಳ ಪರೀಕ್ಷೆ ಕುರಿತಂತೆ ಆರೋಗ್ಯ ಇಲಾಖೆ ವತಿಯಿಂದ ಬಿಬಿಎಂಪಿ ಹಾಗೂ ಎಲ್ಲಾ ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದಿದ್ದಾರೆ.
Advertisement
ಮಂಕಿಪಾಕ್ಸ್ ಸೋಂಕು ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಕಣ್ಗಾವಲು, ಸಾಂಸ್ಥಿಕ ಐಸೋಲೇಶನ್ ಗಾಗಿ ಸೂಕ್ತ ಸ್ಥಳಗಳನ್ನು ಗೊತ್ತುಪಡಿಸುವುದು, ಕಡ್ಡಾಯ ಸಂಪರ್ಕ ಪತ್ತೆ ಮತ್ತು ಸ್ಯಾಂಪಲ್ ಗಳ ಪರೀಕ್ಷೆ ಕುರಿತಂತೆ ಆರೋಗ್ಯ ಇಲಾಖೆ ವತಿಯಿಂದ ಬಿಬಿಎಂಪಿ ಹಾಗೂ ಎಲ್ಲಾ ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.@DHFWKA pic.twitter.com/nKFfGkkuDJ
— Dr Sudhakar K (@mla_sudhakar) August 1, 2022
Advertisement
ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ: ಏರ್ ಪೋರ್ಟ್, ರೈಲ್ವೆ ಸ್ಟೇಷನ್, ಬಸ್ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಟೀಂ ನೇಮಕ ಮಾಡಬೇಕು. ಆರೋಗ್ಯ ಕೇಂದ್ರಕ್ಕೆ ಬರುವವರಿಗೆ ಮಂಕಿಪಾಕ್ಸ್ ಲಕ್ಷಣವಿದ್ದರೆ ತಪಾಸಣೆ ಕೈಗೊಳ್ಳಬೇಕು. ಮಂಕಿಪಾಕ್ಸ್ ಸೋಂಕು ದೃಢಪಟ್ಟರೆ 21 ದಿನಗಳ ಕಾಲ ಐಸೋಲೇಷನ್ ಮಾಡಬೇಕು. ಇದನ್ನೂ ಓದಿ: ಪೊಲೀಸರಿಗಿಂತ ಇಡಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ: ಮೋದಿ ವಿರುದ್ಧ ಅಶೋಕ್ ಗೆಹ್ಲೋಟ್ ಕಿಡಿ
Advertisement
Advertisement
ಸಂಪೂರ್ಣ ಗುಣಮುಖವಾಗುವವರೆಗೆ ತಜ್ಞರ ಮೇಲ್ವಿಚಾರಣೆಯಲ್ಲಿರಬೇಕು. ಯುಪಿಎಚ್‍ಸಿಗಳಲ್ಲಿ ಮಂಕಿಪಾಕ್ಸ್ ಬಗ್ಗೆ ಜನರಿಗೆ ಮಾಹಿತಿ ತಿಳಿಸಬೇಕು. ಮಂಕಿಪಾಕ್ಸ್ ದೃಢವಾಗದಿದ್ದರೂ ವರದಿ ಬರುವವರೆಗೆ ಆರೈಕೆ ಮಾಡಬೇಕು. ಸೋಂಕು ಹರಡದಂತೆ ತಡೆಯುವ ನಿಯಮದಂತೆ ಆರೈಕೆ ಮಾಡಬೇಕು. ಚರ್ಮ, ಮಕ್ಕಳ ಸ್ಪೆಷಾಲಿಟಿ ಆಸ್ಪತ್ರೆ ಒಪಿಡಿಯಲ್ಲಿ ಹೆಚ್ಚಿನ ನಿಗಾವಹಿಸಬೇಕು.