ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬ ಯುವಕನ ಕೊಲೆ ಅತ್ಯಂತ ಹೇಯ ಕೃತ್ಯ. ಕೆಲ ದಿನಗಳ ಹಿಂದೆ ಸುಳ್ಯದಲ್ಲಿ ಅನ್ಯ ಧರ್ಮದ ಯುವಕನ ಕೊಲೆಯಾಗಿತ್ತು. ಆ ಕೊಲೆಗೆ ಪ್ರತಿಕಾರವಾಗಿ ಈ ಕೊಲೆ ನಡೆದ ಶಂಕೆಯಿದೆ. ಇದು ಖಂಡನೀಯ. ಕೊಲೆಗೆ ಕೊಲೆ ಪ್ರತಿಕಾರವಲ್ಲ. ಸರ್ಕಾರ ಹತ್ಯೆ ನಡೆಸಿದ ದುಷ್ಕರ್ಮಿಗಳ ಮಟ್ಟ ಹಾಕಲಿ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಟ್ವೀಟ್‍ನಲ್ಲಿ ಏನಿದೆ?
ಕರ್ನಾಟಕದಲ್ಲಿ ‘ಆಪರೇಷನ್ ಕಮಲ’ವೆಂಬ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಮೊದಲ ದಿನದಿಂದಲೂ ಭ್ರಷ್ಟಾಚಾರದ ಜಾತ್ರೆಯನ್ನೇ ನಡೆಸಿಕೊಂಡು ಬಂದಿದೆ. ಸಿಎಂ ಬೊಮ್ಮಾಯಿ ಅವರ 40% ಸರ್ಕಾರದ ಒಂದು ವರ್ಷದ ಆಡಳಿತವು ಕರ್ನಾಟಕದ ‘ಭ್ರಷ್ಟಾಚಾರದ ಮಹಾಪರ್ವ’ ಎಂದೇ ಇತಿಹಾಸದಲ್ಲಿ ದಾಖಲಾಗಲಿದೆ. ದ.ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬ ಯುವಕನ ಕೊಲೆ ಅತ್ಯಂತ ಹೇಯ ಕೃತ್ಯ. ಕೆಲ ದಿನಗಳ ಹಿಂದೆ ಸುಳ್ಯದಲ್ಲಿ ಅನ್ಯ ಧರ್ಮದ ಯುವಕನ ಕೊಲೆಯಾಗಿತ್ತು. ಆ ಕೊಲೆಗೆ ಪ್ರತಿಕಾರವಾಗಿ ಈ ಕೊಲೆ ನಡೆದ ಶಂಕೆಯಿದೆ. ಇದು ಖಂಡನೀಯ. ಕೊಲೆಗೆ ಕೊಲೆ ಪ್ರತಿಕಾರವಲ್ಲ. ಸರ್ಕಾರ ಹತ್ಯೆ ನಡೆಸಿದ ದುಷ್ಕರ್ಮಿಗಳ ಮಟ್ಟ ಹಾಕಲಿ. ಇದನ್ನೂ ಓದಿ: ನಮ್ಮದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡ್ತಿದ್ದೇವೆ: ಬಿಜೆಪಿ ಕಾರ್ಯಕರ್ತ ಚಂದ್ರಹಾಸ್
ರಾಜ್ಯದಲ್ಲಿ ಧಾರ್ಮಿಕ ಹತ್ಯೆಗಳು ಪದೇ ಪದೇ ನಡೆಯುತ್ತಿವೆ. ಈ ಸರಣಿ ಕೊಲೆಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವ ಸಂಕೇತ. ಕಾನೂನು ದುರ್ಬಲವಾದಾಗ ಮಾತ್ರ ಇಂತಹ ಭೀಕರ ಹತ್ಯೆಗಳು ನಡೆಯಲು ಸಾಧ್ಯ. ರಾಜ್ಯ ಸರ್ಕಾರ ಹೆಣದ ರಾಜಕೀಯ ಮಾಡುವುದನ್ನು ಬಿಟ್ಟು ಕಾನೂನು ಸುವ್ಯವಸ್ಥೆ ಬಿಗಿಗೊಳಿಸಲಿ. ಹತ್ಯೆ ಪರಂಪರೆ ಇಲ್ಲಿಗೆ ಕೊನೆಯಾಗಲಿ ಎಂದು ಟ್ವೀಟ್ ಮಾಡಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ – ಕರ್ನಾಟಕ ಕಾಂಗ್ರೆಸ್ SDPI, PFI ಗೆ ಪ್ರೋತ್ಸಾಹ ನೀಡುತ್ತಿದೆ: ಜೋಶಿ