7 ಷರತ್ತು ವಿಧಿಸಿ ಜಾಮೀನು ಸಿಕ್ಕಿದ್ರೂ ಮುರುಘಾ ಶ್ರೀಗಳಿಗೆ ಬಿಡುಗಡೆ ಭಾಗ್ಯವಿಲ್ಲ

Public TV
1 Min Read
MURUGHA SHREE

ಬೆಂಗಳೂರು: ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಶರಣರಿಗೆ (Shivamurthy Murugha Sharanaru) ಕೊನೆಗೂ ಹೈಕೋರ್ಟ್‌ (Karnataka High Court) ಜಾಮೀನು ಮಂಜೂರು ಮಾಡಿದೆ. ಜಾಮೀನು (Bail) ಮಂಜೂರು ಆಗಿದ್ದರೂ ಶ್ರೀಗಳಿಗೆ ಬಿಡುಗಡೆ ಭಾಗ್ಯವಿಲ್ಲ.

ಪೋಕ್ಸೋ ಪ್ರಕರಣದಲ್ಲಿ(POSCO Case) ಜೈಲು ಸೇರಿದ್ದ ಮುರುಘಾ ಶ್ರೀಗಳಿಗೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಜಾಮೀನು ನೀಡಿದೆ. ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದರೂ ಎರಡನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿಯಿದೆ. ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿದರೆ ಮಾತ್ರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

HIGH COURT

ವಿಚಾರಣೆ ಮುಗಿಯುವವರೆಗೂ ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್‌ಪೋರ್ಟ್‌ ಅನ್ನು ಕೋರ್ಟ್‌ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ. ಇದನ್ನೂ ಓದಿ: ಐವರ ಜಲಸಮಾಧಿ ಬಳಿಕ ಎಚ್ಚೆತ್ತ ಅಧಿಕಾರಿಗಳು – ಆರಂಭವಾಯ್ತು ತಡೆಗೋಡೆ ನಿರ್ಮಾಣ ಕಾರ್ಯ

ಮೈಸೂರಿನ ನಜರಾಬಾದ್ ಪೊಲೀಸ್‌ ಠಾಣೆಯಿಂದ ಚಿತ್ರದುರ್ಗ ಗ್ರಾಮೀಣ ಠಾಣೆಗೆ ವರ್ಗಾವಣೆಯಾಗಿದ್ದ ಪ್ರಕರಣದ ಅಡಿ ಮಾತ್ರ ಜಾಮೀನು ಸಿಕ್ಕಿದೆ.

ಮುರುಘಾ ಶರಣರು ಹಾಸ್ಟೆಲ್‌  ವಾರ್ಡನ್ ರಶ್ಮಿ ಮೂಲಕ ಮಕ್ಕಳನ್ನು ರೂಮಿಗೆ ಕರೆಸಿಕೊಳ್ಳುತ್ತಿದ್ದರು. ಮತ್ತು ಬರಿಸುವ ಚಾಕಲೇಟ್ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಸಂತ್ರಸ್ತರು ದೂರು ನೀಡಿದ್ದರು. ಇದು ಎರಡನೇ ಪೋಕ್ಸೋ ಪ್ರಕರಣವಾಗಿದ್ದು ಈ ಪ್ರಕಣದ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿದೆ.

Share This Article