ಬೆಂಗಳೂರು: ಸಂಸದ ಅನಂತ್ ಕುಮಾರ್ (Ananth Kumar) ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಗೆ ಹೈಕೋರ್ಟ್ (High Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಸಂಸದ ಅನಂತ್ ಕುಮಾರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ರು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣದೀಕ್ಷಿತ್ ಪೀಠ (KrishnaDeekshith Peet) ಅವರು ಅನಂತ್ ಕುಮಾರ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ. ಅವರಿಗೆ ಗೌರವ ನೀಡುವುದು ನಮ್ಮ ಜವಾಬ್ದಾರಿ. ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗೆ ಗೌರವ ಕೊಡುವುದು ನಮ್ಮ ಜವಾಬ್ದಾರಿ. ಅವರ ಪಾಲಿಸಿ ಇಷ್ಟ ಇಲ್ಲದಿರಬಹುದು, ವಿರೋಧ ಪಡಿಸಬಹುದು. ರಾಮಜನ್ಮ ಭೂಮಿ ನಿನ್ನದಲ್ಲ ಮಗನೇ ಇಂಥವೆಲ್ಲಾ ಮಾತನಾಡುತ್ತಾರಾ? ಇದು ಎಷ್ಟು ಕೀಳುಭಾಷೆ ಎಂದು ಕೋರ್ಟ್‌ನಲ್ಲಿ ಅನಂತ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 1983ರಿಂದ ನಾನು ವಿಧಾನಸಭೆಯಲ್ಲಿದ್ದೇನೆ.. ಬಜೆಟ್ ಮಂಡಿಸುವಾಗ ಯಾರೂ ವಾಕ್‌ಔಟ್ ಮಾಡಿರಲಿಲ್ಲ: ಬಿಜೆಪಿ ವಿರುದ್ಧ ಸಿಎಂ ಗರಂ
Advertisement
Advertisement
ಜೊತೆಗೆ ಪದಬಳಕೆ ಮಾಡುವಾಗ ಆದರ ಬಗ್ಗೆ ಎಚ್ಚರಿಕೆ ವಹಿಸಬೇಕು. ನಿಮ್ಮ ಅರ್ಜಿದಾರರಿಗೆ ಸಲಹೆ ನೀಡಿ ಎಂದು ಹೆಗಡೆ ಪರ ವಕೀಲರಿಗೆ ಸೂಚನೆ ನೀಡಲಾಗಿದೆ. ಅವರ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಸೂಚಿಸಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ನೇಮಕ
Advertisement
Advertisement
ಬನವಾಸಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅನಂತ್ ಕುಮಾರ್ ಹೆಗಡೆ ಅವರು, ಸಿದ್ದರಾಮಯ್ಯ ಅವರಿಗೆ ಮಗನೇ ಎನ್ನದೇ ಬೇರೆನು ಹೇಳಲು ಸಾಧ್ಯ? ಅಪ್ಪ ಅಂತಲೋ, ಅಜ್ಜ ಅಂತಲೋ, ಮಾಮಾ ಅಂತಲೋ ಕರೆಯಲು ಸಾಧ್ಯವೇ? ಯುದ್ಧ ಕಾಲದಲ್ಲಿ ಯಾವ ಭಾಷೆಯಲ್ಲಿ ಮಾತನಾಡಬೇಕೋ ಅದನ್ನೇ ಬಳಸಬೇಕು ಎಂದು ಏಕವಚದನಲದಲ್ಲೇ ಲೇವಡಿ ಮಾಡಿ ಮಾತನಾಡಿದ್ದರು. ಅವರ ಈ ಹೇಳಿಕೆ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು