Bengaluru Rural
ಹಿರಿಯ ನಟಿ ಲೀಲಾವತಿ ಬಡವರಿಗಾಗಿ ನಿರ್ಮಿಸಿದ್ದ ಆಸ್ಪತ್ರೆ ದುಷ್ಕರ್ಮಿಗಳಿಂದ ಧ್ವಂಸ

ಬೆಂಗಳೂರು: ಬಡವರ ಅನುಕೂಲಕ್ಕಾಗಿ ಹಿರಿಯ ನಟಿ ಡಾ.ಲೀಲಾವತಿ ಅವರು ನಿರ್ಮಿಸಿದ್ದ ಆಸ್ಪತ್ರೆಯನ್ನು ಭಾನುವಾರ ರಾತ್ರಿ ಕಿಡಿಗೇಡಿಗಳು ದಾಂಧಲೆ ನಡೆಸಿ ಧ್ವಂಸಗೊಳಿಸಿದ್ದಾರೆ.
ಸ್ಯಾಂಡಲ್‍ವುಡ್ ನ ಹಿರಿಯ ನಟಿ ಲೀಲಾವತಿ ನಗರದ ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಡಾ.ಎಂ.ಲೀಲಾವತಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರ್ಮಿಸಿದ್ರು. ಐದು ವರ್ಷದ ಹಿಂದೆ ಗ್ರಾಮಾಂತರ ಪ್ರದೇಶದ ಹಳ್ಳಿಗಾಡಿನ ಬಡವರಿಗಾಗಿ ಲೀಲಾವತಿಯವರು, ಸ್ವಂತ ಖರ್ಚಿನಲ್ಲಿ ಆಸ್ಪತ್ರೆಯನ್ನ ನಿರ್ಮಿಸಿ ಸರ್ಕಾರದ ಸುಪರ್ದಿಗೆ ನೀಡಿದ್ದರು.
ಭಾನುವಾರ ರಾತ್ರಿ ಯಾರು ಇಲ್ಲದ ವೇಳೆಯಲ್ಲಿ ಕಿಡಿಗೇಡಿಗಳು ದಾಂಧಲೆ ನಡೆಸಿ ಪೀಠೋಪಕರಣ, ಔಷಧಿಗಳು, ಸೇರಿದಂತೆ ಆಸ್ಪತ್ರೆಯ ಮೇಲ ಚಾವಣಿಯನ್ನು ಸಹ ಧ್ವಂಸಗೊಳಿಸಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ನಟಿ ಲೀಲಾವತಿ ಹಾಗೂ ಮಗ ವಿನೋದ್‍ರಾಜ್ ಭೇಟಿ ನೀಡಿ ಬೇಸರದಿಂದ ಕಣ್ಣೀರಿಟ್ಟರು.
ಪದೇ ಪದೇ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಇಂತಹ ಕೃತ್ಯಗಳನ್ನು ಮಾಡಿ ನಮಗೆ ನೋವುಂಟು ಮಾಡುತ್ತಿದ್ದಾರೆ ಎಂದು ನಟಿ ಲೀಲಾವತಿ ಬೇಸರ ವ್ಯಕ್ತಪಡಿಸಿದ್ರು. ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆಯನ್ನ ನಡೆಸುತಿದ್ದಾರೆ.
