ಆನೇಕಲ್: ಅಕ್ರಮ ಸಂಬಂಧ (Illicit Relationship) ಶಂಕೆಯ ಮೇಲೆ ಪತಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಹತ್ಯೆಗೈದ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ತಮ್ಮನಾಯಕನಹಳ್ಳಿಯಲ್ಲಿ ನಡೆದಿದೆ.
ಲಕ್ಷ್ಮಮ್ಮ (40) ಪತಿಯಿಂದ ಕೊಲೆಯಾದ ಮಹಿಳೆ. ಮಹದೇವಯ್ಯ (45) ಪತ್ನಿಯನ್ನು ಹತ್ಯೆಗೈದ ಪತಿ. ಇವರಿಬ್ಬರಿಗೆ ಆರು ಜನ ಮಕ್ಕಳಿದ್ದರು. ಮಹದೇವಯ್ಯ ಆನೇಕಲ್‌ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಲಕ್ಷ್ಮಮ್ಮ ಗಾರೆ ಕೆಲಸ ಮಾಡಿಕೊಂಡಿದ್ದರು. ಗಾರೆ ಕೆಲಸ ಮಾಡುವ ವ್ಯಕ್ತಿಯ ಜೊತೆ ಲಕ್ಷ್ಮಮ್ಮ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಪತಿ ಶಂಕಿಸಿದ್ದು, ಈ ಬಗ್ಗೆ ಹಲವು ಬಾರಿ ಲಕ್ಷ್ಮಮ್ಮಹಾಗೂ ಮಹದೇವಯ್ಯ ನಡುವೆ ಗಲಾಟೆ ನಡೆದಿತ್ತು. ಇದನ್ನೂ ಓದಿ: ಕುಡಿದ ನಶೆಯಲ್ಲಿ ಟ್ರಕ್‌ನ ರೈಲ್ವೆ ಹಳಿಯಲ್ಲಿ ಬಿಟ್ಟ ಚಾಲಕ – ತಪ್ಪಿದ ಭಾರೀ ದುರಂತ
- Advertisement
ಈ ವಿಚಾರ ಇಡೀ ತಮ್ಮನಾಯಕನಹಳ್ಳಿ ಗ್ರಾಮದ ಜನಕ್ಕೆ ತಿಳಿದಿತ್ತು. ಜನರು ಅಕ್ರಮ ಸಂಬಂಧದ ಬಗ್ಗೆ ಮಾತನಾಡಿಕೊಳ್ಳುತ್ತಿದ್ದರು. ಇದರಿಂದ ಮನನೊಂದ ಮಹದೇವಯ್ಯ ಪತ್ನಿ ಲಕ್ಷ್ಮಮ್ಮತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಮನೆಯಲ್ಲಿ ಮಲಗಿದ್ದಾಗಲೇ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದು, ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಂಬಳ ನೋಡಿ ವಾಪಸ್ಸಾಗ್ತಿದ್ದ ವೇಳೆ ಭೀಕರ ಅಪಘಾತ- ಇಬ್ಬರು ಸಾವು, ಮೂವರು ಗಂಭೀರ
- Advertisement